ಮೈಸೂರು ದಸರಾದಲ್ಲಿ ತುತ್ತೂರಿ ಬ್ಯಾನ್: ಪೊಲೀಸ್ ಕಮೀಷನರ್ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೈಸೂರು ದಸರಾ ಸಂದರ್ಭದಲ್ಲಿ ತುತ್ತೂರಿ ಬ್ಯಾನ್ ಮಾಡುವಂತೆ ಸೂಚಿಸಿ ಮೈಸೂರು ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ.

ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ತುತ್ತೂರಿ ಕಿರಿಕಿರಿ ಉಂಟುಮಾಡುವ ಹಿನ್ನೆಲೆ ಕರ್ನಾಟಕ ಪೊಲೀಸ್ ಕಾಯ್ದೆ 1963, ಕಲಂ 35, 36 ಮತ್ತು 92 (Q) ಅಡಿ ವುವುಜೆಲಾ (ತುತ್ತೂರಿ) ಮಾರಾಟ ಮಾಡುವುದು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ.

ಕರ್ನಾಟಕ ಪೊಲೀಸ್ ಕಾಯ್ದೆ 1963 ಸೆಕ್ಷನ್ 92 (Q) ಪ್ರಕಾರ ಹಾಗೂ ಭಾರತೀಯ ನ್ಯಾಯ ಸಂಹಿತೆ-2023 ಸೆಕ್ಷನ್ 270ರಲ್ಲಿ ಸಾರ್ವಜನಿಕ ಉಪದ್ರವವನ್ನು ಅಪರಾಧವೆಂದು ಪರಿಗಣಿಸಿದ್ದು, ಸಾರ್ವಜನಿಕ ಆರೋಗ್ಯ, ಸುರಕ್ಷತೆ, ನೈತಿಕತೆಗೆ ಕಿರಿಕಿರಿ ಉಂಟುಮಾಡುತ್ತದೆ ಎಂದು ಪರಿಗಣಿಸಲಾಗಿದೆ.

ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನಿನನ್ವಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಈ ಘಟಕದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

- Advertisement - Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!