ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಗತ್ತನ್ನೇ ಬೆಚ್ಚಿಬೀಳಿಸುವ ಬೆಳವಣಿಗೆಯೊಂದರಲ್ಲಿ, ವೆನೆಜುವೆಲಾದ ಮೇಲೆ ಅಮೆರಿಕದ ವಾಯುಸೇನೆ ಭೀಕರ ದಾಳಿ ನಡೆಸಿದ್ದು, ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿಯನ್ನು ಸೆರೆಹಿಡಿಯಲಾಗಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಧಿಕೃತವಾಗಿ ಘೋಷಿಸಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣವಾದ ‘ಟ್ರೂತ್ ಸೋಶಿಯಲ್’ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಟ್ರಂಪ್, “ಅಮೆರಿಕದ ಕಾನೂನು ಜಾರಿ ಸಂಸ್ಥೆಗಳ ಸಹಯೋಗದೊಂದಿಗೆ ನಡೆಸಿದ ಬೃಹತ್ ಕಾರ್ಯಾಚರಣೆಯಲ್ಲಿ ಮಡುರೊ ದಂಪತಿಯನ್ನು ಸೆರೆಹಿಡಿದು ದೇಶದಿಂದ ಹೊರಗೆ ಕರೆತರಲಾಗಿದೆ. ಈ ಯಶಸ್ವಿ ಕಾರ್ಯಾಚರಣೆಯ ಹೆಚ್ಚಿನ ವಿವರಗಳನ್ನು ಫ್ಲೋರಿಡಾದ ಮಾರ್-ಎ-ಲಾಗೊ ನಿವಾಸದಲ್ಲಿ ಶೀಘ್ರವೇ ಬಹಿರಂಗಪಡಿಸಲಾಗುವುದು” ಎಂದು ತಿಳಿಸಿದ್ದಾರೆ.

