ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ದೇಣಿಗೆ ಮತ್ತು ಕಾಣಿಕೆ ಹಣದ ಹಗರಣ ವಿವಾದಕ್ಕೆ ಸಂಬಂಧಿಸಿದಂತೆ ರಾಮ ಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ಆಪ್ತ ಸಹಾಯಕ ಟಿನ್ನು ಯಾದವ್ ಸೇರಿದಂತೆ ಎಂಟು ಜನರನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ ಟ್ರಸ್ಟ್‌ನ ಇಬ್ಬರು ಪ್ರಮುಖ ಉನ್ನತ ಪದಾಧಿಕಾರಿಗಳು ತಮ್ಮ ಸ್ಥಾನಗಳಿಗೆ ದಿಢೀರ್ ರಾಜೀನಾಮೆ ನೀಡಿದ್ದಾರೆ.
ವಿಶೇಷ ತನಿಖಾ ತಂಡ ನಡೆಸಿದ ತೀವ್ರ ಕಾರ್ಯಾಚರಣೆಯ ನಂತರ ಎಂಟು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿತ್ತು. ಈ ಬಂಧನದ ಬೆಳವಣಿಗೆಯಿಂದಾಗಿ ಟ್ರಸ್ಟ್‌ನ ಆಡಳಿತ ಮಂಡಳಿಯ ಮೇಲೆ ಭಾರಿ ಒತ್ತಡ ಉಂಟಾಗಿತ್ತು. ಇದರ ಬೆನ್ನಲ್ಲೇ. ಅವರೊಂದಿಗೆ ಟ್ರಸ್ಟ್‌ನ ಮತ್ತೊಬ್ಬ ಹಿರಿಯ ಹಾಗೂ ಪ್ರಮುಖ ಸದಸ್ಯರಾದ ಅನಿಲ್ ಮಿಶ್ರಾ ಕೂಡ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.



