March 23, 2026
Monday, March 23, 2026
spot_img

ನಂಬಿಕೆ ಭಾರತದ ಪ್ರಬಲ ಕರೆನ್ಸಿ….ಮಲೇಷ್ಯಾದಲ್ಲಿ ಪ್ರಧಾನಿ ಮೋದಿಗೆ ಸಿಕ್ಕಿತು ಅದ್ದೂರಿ ಸ್ವಾಗತ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: :

ಮಲೇಷ್ಯಾಕ್ಕೆ ತೆರಳಿದ ಪ್ರಧಾನಿ ನರೇಂದ್ರ ಮೋದಿಗೆ ಆತ್ಮೀಯ ಸ್ವಾಗತ ದೊರಕಿದೆ. ಪ್ರಧಾನಿ ಮೋದಿಗೆ ಅಪ್ಪುಗೆಯ ಮೂಲಕ ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಆತ್ಮೀಯವಾಗಿ ಸ್ವಾಗತಿಸಿದರು.

ಬಳಿಕ ಪ್ರಧಾನಿ ನರೇಂದ್ರ ಮೋದಿ ಅಲ್ಲಿರುವ ಭಾರತೀಯ ಸಮುದಾಯದವರೊಂದಿಗೆ ಸಂವಾದ ನಡೆಸಿದರು. ಈ ವೇಳೆ ಮಾತನಾಡಿದ ಮೋದಿ, ‘ನಂಬಿಕೆ ಭಾರತದ ಪ್ರಬಲ ಕರೆನ್ಸಿಯಾಗಿದೆ. ಮಲೇಷ್ಯಾ ವಿಶ್ವದ ಎರಡನೇ ಅತಿದೊಡ್ಡ ಭಾರತೀಯ ಮೂಲದ ಸಮುದಾಯವನ್ನು ಹೊಂದಿದೆ. ಭಾರತೀಯ ಮತ್ತು ಮಲೇಷಿಯಾದ ಹೃದಯಗಳನ್ನು ಸಂಪರ್ಕಿಸುವ ಬಹಳಷ್ಟು ವಿಷಯಗಳಿವೆ. ನೀವು ನಮ್ಮನ್ನು ಸಂಪರ್ಕಿಸುವ ಜೀವಂತ ಸೇತುವೆ ಎಂದು ಹೇಳಿದ್ದಾರೆ.

ಭಾರತೀಯ ಮೂಲದ ಸುಮಾರು ಮೂರು ಮಿಲಿಯನ್ ಜನರು ಮಲೇಷ್ಯಾದಲ್ಲಿ ವಾಸಿಸುತ್ತಿದ್ದಾರೆ. ಅವರಲ್ಲಿ ಬಹುಪಾಲು ತಮಿಳು ಮೂಲದವರು. ಹೀಗಾಗಿ, ತಮಿಳು ಭಾಷೆಯ ಕುರಿತು ಮಾತನಾಡಿದ ಮೋದಿ, ‘ತಮಿಳು ಜಗತ್ತಿಗೆ ಭಾರತ ನೀಡಿದ ಕೊಡುಗೆ. ತಮಿಳು ಸಾಹಿತ್ಯ ಶಾಶ್ವತ ಮತ್ತು ಜಾಗತಿಕವಾಗಿದೆ. ಭಾರತದ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್, ಕೇಂದ್ರ ಸಚಿವರಾದ ಎಸ್ ಜೈಶಂಕರ್ ಮತ್ತು ನಿರ್ಮಲಾ ಸೀತಾರಾಮನ್ ಅವರಂತಹ ತಮಿಳು ಸಮುದಾಯದ ನಾಯಕರು ತಮ್ಮ ಪ್ರತಿಭೆಯಿಂದ ಮಾನವೀಯತೆಗೆ ಸೇವೆ ಸಲ್ಲಿಸಿದ್ದಾರೆ’ ಎಂದರು.

ಭಾರತ-ಮಲೇಷ್ಯಾ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಈ ಭೇಟಿಯು ಮಹತ್ವದ ಹೆಜ್ಜೆಯಾಗಿದೆ. ಈ ಭೇಟಿಯ ವೇಳೆ ವ್ಯಾಪಾರ ಮತ್ತು ಹೂಡಿಕೆಯನ್ನು ವಿಸ್ತರಿಸುವುದು, ತಂತ್ರಜ್ಞಾನ ಸಹಕಾರವನ್ನು ಆಳಗೊಳಿಸುವುದು, ಪ್ರಮುಖ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಸಮನ್ವಯದ ಕುರಿತು ಉನ್ನತ ಮಟ್ಟದ ಚರ್ಚೆಗಳನ್ನು ನಡೆಸಲಾಗುವುದು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !