ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಕೀಯದಲ್ಲಿ ರೋಚಕ ಕ್ಷಣಕ್ಕೆ ಸಾಕ್ಷಿಯಾದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯು ಬಹುತೇಕ ಪೂರ್ಣಗೊಂಡಿದೆ. ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರ ಪರವಾಗಿ ಫಲಿತಾಂಶ ವಾಲುವ ಸಾಧ್ಯತೆಗಳು ದಟ್ಟವಾಗಿವೆ.
ಈ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ವ್ಯಕ್ತಪಡಿಸಿದ್ದು, ಶೃಂಗೇರಿಯ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಕ್ಕಿದೆ ಎಂದು ತಿಳಿಸಿದರು.
ಈ ಕುರಿತು ಪೋಸ್ಟ್ ಮಾಡಿರುವ ವಿಜಯೇಂದ್ರ, ಶೃಂಗೇರಿಯ ಧರ್ಮಭೂಮಿಯಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಕ್ಕಿದೆ. ಡಿ.ಎನ್. ಜೀವರಾಜ್ ಅವರ ಗೆಲುವಿನಿಂದ ನಮ್ಮ ಚುನಾವಣಾ ವ್ಯವಸ್ಥೆ ಹಾಗೂ ನ್ಯಾಯಾಂಗದ ಮೇಲಿನ ವಿಶ್ವಾಸ ಹೆಚ್ಚಾಗಿದೆ.ಇದು ಅವರ ಸತತ ಪರಿಶ್ರಮ ಮತ್ತು ದಣಿವರಿಯದ ಹೋರಾಟಕ್ಕೆ ಇಂದು ಪ್ರತಿಫಲ. ಪ್ರತಿ ಮತಕ್ಕೂ ಗೌರವ ತಂದುಕೊಟ್ಟ ಜೀವರಾಜ್ ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿರುವ ಅವರು, ಶೃಂಗೇರಿಯ ಮತದಾರರಿಗೆ ಕೃತಜ್ಞತೆ ಅರ್ಪಿಸಿದ್ದಾರೆ.
2023ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡ ಅವರು ಕೇವಲ 201 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಆದರೆ, ಅಂಚೆ ಮತಗಳ ಎಣಿಕೆಯಲ್ಲಿ ಅಧಿಕಾರಿಗಳು ಲೋಪ ಎಸಗಿದ್ದಾರೆ ಎಂದು ಜೀವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಸಂಬಂಧ ಅಂಚೆ ಮತಗಳ ಮರು ಎಣಿಕೆಗೆ ಕೋರ್ಟ್ ಆದೇಶ ನೀಡಿತ್ತು.
ಹೀಗಾಗಿ ಚಿಕ್ಕಮಗಳೂರಿನ ಐಡಿಎಸ್‌ಜಿ ಕಾಲೇಜಿನಲ್ಲಿ ಅಂಚೆ ಮತಗಳ ಮರು ಎಣಿಕೆ ನಡೆಯಿತು. ಈ ವೇಳೆ ಕಾಂಗ್ರೆಸ್ ಶಾಸಕ ರಾಜೇಗೌಡ ಅವರ ಮತಗಳ ಸಂಖ್ಯೆಯಲ್ಲಿ ಕುಸಿತ ಕಂಡುಬಂದಿದ್ದು, ಬಿಜೆಪಿಯ ಜೀವರಾಜ್ ಅವರಿಗೆ ಮುನ್ನಡೆ ಸಿಕ್ಕಿದೆ ಎನ್ನಲಾಗಿದೆ.



