ಹೊಸದಿಗಂತ ವರದಿ,ಶಿವಮೊಗ್ಗ:
ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಜೊತೆ ಟಿಕೆಟ್ ಅಸಮಾಧಾನ ಕುರಿತು ಚರ್ಚೆ ನಡೆಸಿದ್ದೇನೆ. ಈಶ್ವರಪ್ಪ ಅವರನ್ನು ಮನವೊಲಿಸುವ ಪ್ರಯತ್ನ ನಡೆದಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.
ನಗರದ ಈಶ್ವರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿ, ಇನ್ನೂ ಕೂಡಾ ಸಮಯ ಮೀರಿಲ್ಲ. ನಾನು ಟಿಕೆಟ್ ವಿಚಾರವಾಗಿ ದೆಹಲಿಗೆ ಹೋಗಿ ವರಿಷ್ಠರ ಜೊತೆ ಚರ್ಚೆ ನಡೆಸುತ್ತೇನೆ. ಇನ್ನೂ ಚುನಾವಣೆ ಘೋಷಣೆ ಆಗಿಲ್ಲ. ಬದಲಾವಣೆಗೆ ಸಾಕಷ್ಟು ಅವಕಾಶ ಇದೆ. ಈಶ್ವರಪ್ಪ ಅವರಿಗೆ ಪದೇ ಪದೇ ಅನ್ಯಾಯ ಆಗುತ್ತಿದೆ ಎಂದರು.
ಇದನ್ನು ಸರಿಪಡಿಸಬೇಕು. ಎಲ್ಲವೂ ಸರಿ ಆಗುತ್ತದೆ ಎನ್ನುವ ವಿಶ್ವಾಸ ಇದೆ. ಈಗಲೂ ಕಾಂತೇಶ್‌ಗೆ ಹಾವೇರಿ ಟಿಕೇಟ್ ನೀಡಲು ಅವಕಾಶ ಇದೆ ಎಂದರು.