ಮತ್ತೆ ಗೆಲುವಿನ ಹಾದಿಗೆ ಮರಳಲು ಯತ್ನ: ಕೋಲ್ಕತ್ತಾ ವಿರುದ್ಧ ಟಾಸ್ ಗೆದ್ದ ಚೆನ್ನೈ ಬೌಲಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ ಇಂದಿನ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್​ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಟಾಸ್ ಗೆದ್ದ ಸಿಎಸ್​ಕೆ ನಾಯಕ ರುತುರಾಜ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
ಸತತ ಎರಡು ಸೋಲಿನ ಬಳಿಕ ಋತರಾಜ್​ ಗಾಯಕವಾಡ ನೇತೃತ್ವದ ಚೆನ್ನೈ ತಂಡ ಮತ್ತೆ ಗೆಲುವಿನ ಹಾದಿಗೆ ಮರಳಲು ಪ್ರಯತ್ನಿಸುತ್ತಿದ್ದು, ಇದುವರೆಗೆ ಸೋಲನುಭವಿಸದ ಕೆಕೆಆರ್ ಆವೇಗವನ್ನು ಕಾಯ್ದುಕೊಳ್ಳಲು ಹವಣಿಸುತ್ತಿದೆ.

ಸಿಎಸ್​ಕೆ ತಂಡ ಆಡಿದ 4 ಪಂದ್ಯಗಳಲ್ಲಿ 2 ಗೆಲುವು ಹಾಗೂ 2 ಸೋಲು ಕಂಡಿದೆ. ಐಪಿಎಲ್ 2024ರ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಇಳಿದಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಆಡಿದ 3 ಪಂದ್ಯಗಳಲ್ಲಿ 3 ಗೆಲುವು ಸಾಧಿಸಿ ಐಪಿಎಲ್ 2024ರ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!