ಗೆಲುವಿನ ಲಯಕ್ಕೆ ಬರಲು ಯತ್ನ: ಡೆಲ್ಲಿ ಎದುರು ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಬೌಲಿಂಗ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಐಪಿಎಲ್ ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದು, ಶುಭ್‌ಮನ್ ಗಿಲ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಡೆಲ್ಲಿ ಹಾಗೂ ಗುಜರಾತ್ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಅರುಣ್ ಜೇಟ್ಲಿ ಮೈದಾನ ಆತಿಥ್ಯ ವಹಿಸಿದೆ. ಗುಜರಾತ್ ಟೈಟಾನ್ಸ್‌ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇಂದಿನ ಪಂದ್ಯಕ್ಕೂ ಕಣಕ್ಕಿಳಿದಿದೆ. ಇನ್ನೊಂದೆಡೆ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಡೇವಿಡ್ ವಾರ್ನರ್ ಬದಲಿಗೆ ಶಾಯ್ ಹೋಪ್ ತಂಡ ಕೂಡಿಕೊಂಡಿದ್ದಾರೆ

ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಟೂರ್ನಿಯಲ್ಲಿ8 ಪಂದ್ಯಗಳನ್ನಾಡಿದ್ದು, ಕೇವಲ 3ರಲ್ಲಿ ಗೆದ್ದಿದೆ. ಪ್ಲೇ-ಆಫ್ ರೇಸ್‌ನಲ್ಲಿ ಉಳಿಯಬೇಕಿದ್ದರೆ ಈ ಪಂದ್ಯದಲ್ಲಿ ಗೆಲ್ಲಲೇ ಬೇಕಿದೆ. ಇನ್ನೊಂದೆಡೆ ಡೆಲ್ಲಿ ವಿರುದ್ಧ ಮೊದಲ ಮುಖಾಮುಖಿಯಲ್ಲಿ ಸೋತಿದ್ದ ಗುಜರಾತ್ ಇದೀಗ ಸೇಡು ತೀರಿಸಿಕೊಳ್ಳುವ ಕಾತರದಲ್ಲಿದೆ. ತಂಡ 8 ಪಂದ್ಯದಲ್ಲಿ ತಲಾ 4 ಗೆಲುವು, ಸೋಲು ಕಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!