ಹೊಸದಿಗಂತ ಡಿಜಿಟಲ್ ಡೆಸ್ಕ್:
ತಿರುಪತಿ ದೇವಸ್ಥಾನದಲ್ಲಿ ಭಕ್ತರು ಇನ್ನುಮುಂದೆ ದಿನಗಟ್ಟಲೆ ತಿಮ್ಮಪ್ಪನ ದರ್ಶನಕ್ಕಾಗಿ ಕಾದು ನಿಲ್ಲುವ ಸಮಸ್ಯೆಯಿರುವುದಿಲ್ಲ. 3 ಗಂಟೆಗಳನ್ನೇ ದರ್ಶನ ಮಾಡಿಸುವ ವ್ಯವಸ್ಥೆಯನ್ನು ಸರ್ಕಾರ ಮಾಡುತ್ತಿದೆ.
ಭಕ್ತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಿರುಮಲ ತಿರುಪತಿ ದೇವಸ್ಥಾನ ಮಂಡಳಿಯು ಕೃತಕ ಬುದ್ಧಿಮತ್ತೆ ಮತ್ತು ಅತ್ಯಾಧುನಿಕ ತಂತ್ರಜ್ಞಾನದ ಸಹಾಯದಿಂದ ಹೊಸ ದರ್ಶನ ವ್ಯವಸ್ಥೆಯನ್ನು ಮಾಡಲು ನಿರ್ಧರಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಹೊಸ ವ್ಯವಸ್ಥೆಯಲ್ಲಿ ಭಕ್ತರಿಗೆ ಕೇವಲ 2 ಗಂಟೆಯಲ್ಲಿ ವೆಂಕಟೇಶ್ವರನ ದರ್ಶನ ನೀಡಲಾಗುವುದು.
ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಲು 20 ರಿಂದ 30 ಗಂಟೆಗಳನ್ನು ತೆಗೆದುಕೊಳ್ಳುತ್ತದೆ. ಏಕೆಂದರೆ ಪ್ರತಿದಿನ 1ಲಕ್ಷಕ್ಕೂ ಹೆಚ್ಚು ಭಕ್ತರು ಭೇಟಿ ನೀಡುತ್ತಾರೆ. ವಿಶೇಷ ಪ್ರವೇಶ ದರ್ಶನ ಕೋಟಾ ರದ್ದುಪಡಿಸಲಾಗುವುದು. ವಿಐಪಿ ದರ್ಶನಕ್ಕೆ ಸಂಬಂಧಿಸಿದಂತೆ ವಿವಾದಗಳಿವೆ, ಪ್ರತಿ ತಿಂಗಳ ಮೊದಲ ಮಂಗಳವಾರದಂದು ತಿರುಪತಿಯ ಸ್ಥಳೀಯ ನಾಗರಿಕರಿಗೆ ದರ್ಶನಕ್ಕೆ ವಿಶೇಷ ವ್ಯವಸ್ಥೆ ಇರುತ್ತದೆ. ಇದಲ್ಲದೇ ದೇವಾಲಯದ ಆವರಣದಲ್ಲಿ ಈಗ ನಾಯಕರು ರಾಜಕೀಯ ಹೇಳಿಕೆ ನೀಡುವಂತಿಲ್ಲ. ಹಾಗೆ ಮಾಡಿದಾಗ ಮಂಡಳಿಯು ಅವರಿಗೆ ಲೀಗಲ್ ನೋಟಿಸ್ ನೀಡುತ್ತದೆ ಎಂದು ಟಿಟಿಡಿ ಹೇಳಿದೆ.