September 25, 2026
Friday, September 25, 2026
spot_img

‘ಸಮ್ಮರ್ ಸೆಕೆ’ಗೆ ಟಕ್ಕರ್ ಕೊಡೋಕೆ ಬೆಂಗಳೂರು ರೆಡಿ: ಮಿನಿ ವಾಟರ್ ಟ್ಯಾಂಕ್‌ ಸ್ಥಾಪನೆಗೆ BWSSB ಪ್ಲಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೇಸಿಗೆಯಲ್ಲಿ ಉಂಟಾಗುವ ನೀರಿನ ಕೊರತೆಯನ್ನು ಮನಗಂಡು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಈ ಬಾರಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

ನಗರದ ಕೆಲವು ಪ್ರಮುಖ ಪ್ರದೇಶಗಳಲ್ಲಿ ಮಿನಿ ವಾಟರ್ ಟ್ಯಾಂಕ್‌ಗಳನ್ನು ಸ್ಥಾಪಿಸುವ ಮೂಲಕ ಜನರಿಗೆ ಕುಡಿಯುವ ನೀರಿನ ಲಭ್ಯತೆ ಸುಗಮಗೊಳಿಸಲು ಮಂಡಳಿ ಮುಂದಾಗಿದೆ.

ಇದನ್ನೂ ಓದಿ:

ಹಿರಿಯ ಅಧಿಕಾರಿಗಳೊಂದಿಗೆ ನಡೆದ ಪರಿಶೀಲನಾ ಸಭೆಯ ನಂತರ ಮಾತನಾಡಿದ ಅಧ್ಯಕ್ಷ ವಿ. ರಾಮ್ ಪ್ರಸಾತ್ ಮನೋಹರ್, ಹೆಚ್ಚು ಜನಸಾಂದ್ರತೆ ಇರುವ ಮತ್ತು ನೀರಿನ ಅಭಾವ ಕಾಣಿಸಬಹುದಾದ ಪ್ರದೇಶಗಳನ್ನು ಈಗಾಗಲೇ ಗುರುತಿಸಲಾಗಿದೆ ಎಂದು ಹೇಳಿದರು. ಈ ಪ್ರದೇಶಗಳಲ್ಲಿ ಟ್ಯಾಂಕ್‌ಗಳನ್ನು ಸ್ಥಾಪಿಸಿ ಉಚಿತವಾಗಿ ನೀರು ಪೂರೈಸುವ ವ್ಯವಸ್ಥೆ ಮಾಡುವ ಯೋಜನೆ ಇದೆ ಎಂದು ತಿಳಿಸಿದರು.

ಟ್ಯಾಂಕ್‌ಗಳನ್ನು ತುಂಬಲು BWSSB ಟ್ಯಾಂಕರ್‌ಗಳು ಹಾಗೂ ‘ಸಂಚಾರಿ ಕಾವೇರಿ’ ವಾಹನಗಳಿಗೆ ಆದ್ಯತೆ ನೀಡಲಾಗುತ್ತದೆ. ಅಗತ್ಯವಿದ್ದರೆ ಮಾತ್ರ ಖಾಸಗಿ ಟ್ಯಾಂಕರ್‌ಗಳನ್ನು ಬಳಸಲಾಗುತ್ತದೆ. ಅಧಿಕಾರಿಗಳು ಪ್ರತಿದಿನ ಸ್ಥಳಗಳಿಗೆ ಭೇಟಿ ನೀಡಿ ನೀರಿನ ಸರಬರಾಜು ಸರಿಯಾಗಿ ನಡೆಯುತ್ತಿದೆಯೇ ಎಂದು ಪರಿಶೀಲಿಸಲು ಸೂಚನೆ ನೀಡಲಾಗಿದೆ.

Must Read