ತುಳಸಿಗಿಡ ಹಿಂದು ಧರ್ಮದ ಜನರಿಗೆ ಅವಿಭಾಜ್ಯ ಅಂಗ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್. ವಿ. ರಾಜೀವ್

ಹೊಸದಿಗಂತ ವರದಿ, ಮೈಸೂರು:

ತುಳಸಿ ಗಿಡ ಹಿಂದು ಧರ್ಮದ ಜನರಿಗೆ ಅವವಿಭಾಜ್ಯ ಅಂಗವಾಗಿದೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ರಾಜೀವ್ ಹೇಳಿದರು.
ಬುಧವಾರ ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಕುವೆಂಪುನಗರದ ನವಿಲು ರಸ್ತೆಯಲ್ಲಿರುವ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದ ಆವರಣದಲ್ಲಿ ಶ್ರೀ ಗುರುರಾಘವೇಂದ್ರ ಸ್ವಾಮಿ ಗಳ 427 ನೇ ವರ್ಧಂತಿ ಅಂಗವಾಗಿ ಆಯೋಜಿಸಲಾಗಿದ್ದ ಪ್ರಸಾದ ಹಾಗೂ ತುಳಸಿ ಸಸಿ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತುಳಸಿಗಿಡವನ್ನು ಮನೆಯಲ್ಲಿ ಬೆಳೆಸಿ ಬಳಸಿದರೆ, ವಿವಿಧ ಕಾಯಿಲೆಗಳು ಬರುವುದಿಲ್ಲ. ತುಳಸಿ ಗಿಡದ ಎಲೆಗಳನ್ನು ಬಳಸಿದರೆ ಡೆಂಗ್ಯೂ ಕಾಯಿಲೆಯೂ ವಾಸಿಯಾಗುತ್ತದೆ. ತುಳಸಿಗಿಡವು ಯಥೇಚ್ಛವಾಗಿ ಆಮ್ಲಜನಕವನ್ನು ಉತ್ಪತ್ತಿ ಮಾಡುತ್ತದೆ. ಆದ್ದರಿಂದ ಅಂದಿನ ದಿನಗಳಲ್ಲಿ ರಾಘವೇಂದ್ರಸ್ವಾಮಿಯವರು ತುಳಸಿ ಗಿಡದ ಮಹತ್ವವನ್ನು ಜಗಕ್ಕೆ ಸಾರಿದ್ದರು ಆದ್ದರಿಂದಲೇ ಅವರು ಬೃಂದಾವನದಲ್ಲಿ ಲೀನ ವಾದರು ಎಂದು ರಾಯರನ್ನು ಸ್ಮರಿಸಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಯುವ ಮುಖಂಡ ಎನ್ ಎಂ ನವೀನ್ ಕುಮಾರ್, ಶ್ರೀ ಗುರು ರಾಘವೇಂದ್ರ ಸೇವಾ ಟ್ರಸ್ಟ್ ಅಧ್ಯಕ್ಷ ವಾಸುದೇವಮೂರ್ತಿ ,ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ಸಂಘಟನಾ ಕಾರ್ಯದರ್ಶಿ ಅಜಯ್ ಶಾಸ್ತಿç ,ಅಪೂರ್ವ ಸುರೇಶ್ ,ಪರಿಸರ ಸ್ನೇಹಿ ತಂಡದ ಅಧ್ಯಕ್ಷ ಲೋಹಿತ್,ಹುಡ್ಕೋ ಕುಮಾರ್, ರೇಖಾ ಶ್ರೀನಿವಾಸ್ ,ವಿದ್ಯಾ ,ಹರೀಶ್ ನಾಯ್ಡು ಇನ್ನಿತರರು ಹಾಜರಿದ್ದರು

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!