ಮಡಿಕೇರಿ ತಾಲೂಕು ಕ.ಸಾ.ಪ ಅಧ್ಯಕ್ಷರಾಗಿ ತುಳಸಿ ಮೋಹನ್ ಆಯ್ಕೆ

ಹೊಸದಿಗಂತ ವರದಿ ಮಡಿಕೇರಿ:

ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಕಡ್ಲೇರ ತುಳಸಿ ಮೋಹನ್ ಅವರನ್ನು ಆಯ್ಕೆ ಮಾಡಲಾಗಿದೆ.
ಗೌರವ ಕಾರ್ಯದರ್ಶಿಗಳಾಗಿ ಪುದಿಯನೆರವನ ರಿಶೀತ್ ಮಾದಯ್ಯ ಮತ್ತು ಬಾಳೆಯಡ ದಿವ್ಯಾ ಮಂದಪ್ಪ, ಕೋಶಾಧಿಕಾರಿಯಾಗಿ ಸಿದ್ದರಾಜು ಬೆಳ್ಳಯ್ಯ ಅವರನ್ನು ನೇಮಕಗೊಳಿಸಲಾಗಿದೆ.

ಸಂಘಟನಾ ಕಾರ್ಯದರ್ಶಿಯಾಗಿ ಚೊಕ್ಕಾಡಿ ಪ್ರೇಮಾ ರಾಘವಯ್ಯ ಮತ್ತು ತಳೂರು ದಿನೇಶ್ ಕರುಂಬಯ್ಯ ಅವರನ್ನು ಆಯ್ಕೆಗೊಳಿಸಲಾಗಿದ್ದು, ಸಂಘ ಸಂಸ್ಥೆಗಳ ಪ್ರತಿನಿಧಿಯಾಗಿ ಹೆಚ್. ಟಿ ಅನಿಲ್, ಮಹಿಳಾ ಪ್ರತಿನಿಧಿಗಳಾಗಿ ಶೋಭಾ ಸುಬ್ಬಯ್ಯ, ಗೌರಮ್ಮ ಮಾದಮ್ಮಯ್ಯ, ಪರಿಶಿಷ್ಟ ಜಾತಿ ಪ್ರತಿನಿಧಿಗಳಾಗಿ ಬಿ. ಎಲ್. ಸಂದೇಶ್ ಮತ್ತು ಎಚ್.ಪಿ ಜಯಮ್ಮ, ಪರಿಶಿಷ್ಟ ಪಂಗಡ ಪ್ರತಿನಿಧಿಯಾಗಿ ಬಿ.ಎಸ್. ರಂಗಪ್ಪ, ಹಿಂದುಳಿದ ವರ್ಗಗಳ ಪ್ರತಿನಿಧಿಯಾಗಿ ಎಂ.ಎಂ.ಅಬ್ದುಲ್ಲಾ, ನಿಕಟ ಪೂರ್ವ ಅಧ್ಯಕ್ಷರಾಗಿ ಅಂಬೇಕಲ್ ನವೀನ್ ಕಾರ್ಯನಿರ್ವಹಿಸಲಿದ್ದಾರೆ.

ಪದನಿಮಿತ್ತ ಪ್ರತಿನಿಧಿಗಳಾಗಿ ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಮಡಿಕೇರಿ. ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸರಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ಪ್ರಾಂಶುಪಾಲರು, ಶ್ರೀ ರಾಜರಾಜೇಶ್ವರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಪುರುಷೋತ್ತಮ್, ಸಂಜೀವಿನಿ ಒಕ್ಕೂಟದ ತಾಲೂಕು ಅಧ್ಯಕ್ಷೆ ರೇಖಾ, ಅಂಗನವಾಡಿ ಕಾರ್ಯಕರ್ತೆಯ ಸಂಸ್ಥೆಯ ತಾಲೂಕು ಅಧ್ಯಕ್ಷೆ ಸಿ.ಯು. ಪವಿತ್ರಾ ಕಾರ್ಯನಿರ್ವಹಿಸಲಿದ್ದಾರೆ.

ಅಲ್ಲದೆ ವಿಶೇಷ ಆಹ್ವಾನಿತರಾಗಿ ಕುಡೆಕಲ್ ಸಂತೋಷ್, ಪಿ.ಪಿ ಸೋನಾ ಪ್ರೀತು, ಪೂರ್ಣಿಮಾ ಜೋಷಿ, ಸುನಿಲ್ ಲೋಬೊ, ಮೆಹಬೂಬ್ ಖಾನ್, ಕೆ.ಯು ರಂಜಿತ್, ಗೀತಾ ಗಿರೀಶ್, ಎಂ.ಎಂ ಅಹಮದ್ ಆಲಿ, ಯು.ಸಿ ದಮಯಂತಿ, ಹರೀಶ್ ಸರಳಾಯ, ವಿ ಜಯರಾಜ್, ಜೆ. ಮಹೇಶ್ವರ್, ವಿನೋದ್ ಮೂಡಗೆದ್ದೆ ಮತ್ತು ಚಿತ್ರಾ ಆರ್ಯನ್ ಅವರನ್ನು ನೇಮಿಸಿ ಜಿಲ್ಲಾಧ್ಯಕ್ಷ ಎಂ.ಪಿ ಕೇಶವ ಕಾಮತ್ ಆದೇಶಿಸಿರುವುದಾಗಿ ಜಿಲ್ಲಾ ಗೌರವ ಕಾರ್ಯದರ್ಶಿ ಎಸ್. ಐ.ಮುನೀರ್ ಅಹ್ಮದ್ ತಿಳಿಸಿದ್ದಾರೆ.

ನಿಕಟ ಪೂರ್ವ ಅಧ್ಯಕ್ಷರಾಗಿದ್ದ ಅಂಬೆಕಲ್ ನವೀನ್ ಅವರು ತಮ್ಮ ಕಾರ್ಯಬಾಹುಳ್ಯದ ನಿಮಿತ್ತ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಡ್ಲೇರ ತುಳಸಿ ಮೋಹನ್ ಅವರ ನೇತೃತ್ವದ ನೂತನ ಕಾರ್ಯಕಾರಿ ಮಂಡಳಿಯನ್ನು ಘೋಷಿಸಲಾಗಿದೆ. ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲಿ ಮೊದಲ ಮಹಿಳಾ ಅಧ್ಯಕ್ಷಿಣಿಯಾಗಿ ಕಡ್ಲೇರ ತುಳಸಿ ಮೋಹನ್ ಕಾರ್ಯನಿರ್ವಹಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!