ದ್ವಿಚಕ್ರ ವಾಹನಕ್ಕೆ ಬಸ್‌ ಡಿಕ್ಕಿ; ವೃದ್ಧ ದಂಪತಿ ಸ್ಥಳದಲ್ಲೇ ಸಾವು

ಹೊಸದಿಗಂತ ವರದಿ, ತುಮಕೂರು
ಸಾರಿಗೆ ಸಂಸ್ಥೆ ಬಸ್ ಹಾಗೂ ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ಸಂಭವಿಸಿ ವೃದ್ಧ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಧುಗಿರಿ ತಾಲ್ಲೂಕಿನ ಕಸಬಾ ವ್ಯಾಪ್ತಿಯ ಕವಾಡಿಗರ ಪಾಳ್ಯದಲ್ಲಿ ನಡೆದಿದೆ.
ತಾಲ್ಲೂಕಿನ ಗೊಂದಿಹಳ್ಳಿ ಗ್ರಾಮದ ಶಾಂಭಶಿವಯ್ಯ( 73) ಹಾಗೂ ಶಂಕರಮ್ಮ (67) ಅಪಘಾತದಲ್ಲಿ ಮೃತಪಟ್ಟ ದಂಪತಿ. ತುಮಕೂರಿನಿಂದ ಬರುತ್ತಿದ್ದ ದಂಪತಿಯಿದ್ದ ದ್ವಿಚಕ್ರ ವಾಹನಕ್ಕೆ ಮಧುಗಿರಿ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಬಸ್‌ ವಾಡಿಗರ ಪಾಳ್ಯದ ಸಮೀಪ ಡಿಕ್ಕಿಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಬಸ್ ವಶಕ್ಕೆ ಪಡೆದು ಚಾಲಕನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!