ತುಮಕೂರು ವಾರ್ತಾಧಿಕಾರಿ ಎಂ.ಆರ್. ಮಮತಾ ನಿಧನ

ಹೊಸದಿಗಂತ ವರದಿ,ತುಮಕೂರು:

ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಎಂ. ಆರ್. ಮಮತಾ (47) ಶುಕ್ರವಾರ ಕೊನೆಯುಸಿರೆಳೆದಿದ್ದಾರೆ.

ಮಿದುಳು ರಕ್ತಸ್ರಾವದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅವರು ಕಳೆದ ಕೆಲದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.

ಪತಿ‌ ಹಿರಿಯ ಪತ್ರಕರ್ತ ಎಚ್ ಆರ್ ರವೀಶ್ ,ಮಗ ಪ್ರಜ್ವಲ್ ಹಾಗೂ ಅಪಾರ ಬಂಧುಬಾಂಧವರನ್ನು ಅಗಲಿದ್ದಾರೆ.ಮೃತರ ಅಂತ್ಯಕ್ರಿಯೆ ತುಮಕೂರು ತಾಲ್ಲೂಕು ಹಾಲನೂರು ಗ್ರಾಮದ ಅವರ ತೋಟದಲ್ಲಿ ನಾಳೆ (ಆ.3 ಶನಿವಾರ ) ಮಧ್ಯಾಹ್ನ ನೆರವೇರಲಿದೆ.ಬೆಂಗಳೂರಿನ ಅವರ ಮನೆಯಲ್ಲಿ ಶುಕ್ರವಾರ ಸಂಜೆಯಿಂದ ಶನಿವಾರ ಬೆಳಿಗ್ಗೆ 8 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಇಡಲಾಗುವುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!