ತುಮಕೂರು: ಬಸ್‌ ದುರಂತಕ್ಕೆ ಕಾರಣವಾದವರ ವಿರುದ್ಧ ಕಠಿಣ ಕ್ರಮ; ಸಾರಿಗೆ ಸಚಿವ ಶ್ರೀರಾಮುಲು

ಹೊಸದಿಗಂತ ವರದಿ, ತುಮಕೂರು
ಪಾವಗಡದಲ್ಲಿ ಖಾಸಗಿ ಬಸ್ ದುರಂತಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ತಾಲೂಕಿನಲ್ಲಿ ಖಾಸಗಿ ಬಸ್ ಗಳ ಸಂಚಾರಕ್ಕೆ ನೀಡಲಾಗಿರುವ ಅನುಮತಿಯನ್ನು ರದ್ದು ಮಾಡಿ ಎಲ್ಲಾ ಮಾರ್ಗಗಳಲ್ಲಿ ಸರ್ಕಾರಿ ಬಸ್ ಗಳ ಸಂಚಾರವನ್ನು ಅರಂಭಿಸಲಾಗುವುದು ಎಂದು ಬಳ್ಳಾರಿಯಲ್ಲಿ ಸಾರಿಗೆ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ಪಾವಗಡದ ಪಳವಲ್ಲಿ ಸಮೀಪ ಖಾಸಗಿ ಬಸ್ ಉರುಳಿ ಬಿದ್ದು ಎಂಟು ಮಂದಿ ಸಾವನ್ನಪ್ಪಿರುವ ಘಟನೆಗೆ ಶ್ರೀರಾಮುಲು ತೀವ್ರ ವಿಷಾಧ ವ್ಯಕ್ತಪಡಿಸಿದರು. ಬಸ್ಸಿನ ಛಾವಣಿ ಮೇಲೆ ಪ್ರಯಾಣಿಕರನ್ನು ಹತ್ತಿಸಿಕೊಂಡು ತಿರುವು ಮುರುವಿರುವ ರಸ್ತೆಯಲ್ಲಿ ಅತಿ ವೇಗವಾಗಿ ಬಸ್ ಚಲಾಯಿಸಿದ್ದು ಅಪಘಾತಕ್ಕೆ ಕಾರಣವಾಗಿದೆ ಎಂಬ ವಿಚಾರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದರು.
ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ತಂಡವನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಗಿದ್ದು, ಅವರ ಅವರ ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದರು. ಈ ತಂಡ ಖಾಸಗೀ ಬಸ್ಸಿನ (kA06-c-8933) ಫಿಟ್ ನೆಸ್, ವಿಮೆ, ಲೈಸನ್ಸ್ ವಿಚಾರಗಳ ಬಗ್ಗೆ ಪರಿಶೀಲನೆ ನಡೆಸಲಿದೆ ಎಂದರು.
ವಿದ್ಯಾರ್ಥಿಗಳು ಒಂದು ವಾರದ ಹಿಂದೆ ಪಾವಗಡದ ಡಿಪೋ ಮ್ಯಾನೇಜರ್ ಗೆ ಈ ಮಾರ್ಗದಲ್ಲಿ ಸರ್ಕಾರಿ ಓಡಿಸುವ ಬಗ್ಗೆ ಮನವಿ ಸಲ್ಲಿಸಿದ್ದರೂ ಆ ಬಗ್ಗೆ ಡಿಪೋ ಮ್ಯಾನೇಜರ್ ಕ್ರಮಕೈಗೊಳ್ಳಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಬಸ್ಸುಗಳ ಓವರ್ ಲೋಡಿಂಗ್‌ ಬಗ್ಗೆ ಕ್ರಮವಹಿಸದ ಆರ್‌ಟಿಓ ಮತ್ತು ಪೊಲೀಸರ ಮೇಲೆಯೂ ಕ್ರಮಕೈಗೊಳ್ಳಲಾಗುವುದು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!