Tuesday, September 30, 2025

ತುಮಕೂರು: ಬೈಕ್, ಆಕ್ಟಿವಾ ನಡುವೆ ಭೀಕರ ಅಪಘಾತ: ಮೂವರ ದುರ್ಮರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತುಮಕೂರು ಜಿಲ್ಲೆಯ ಶಿರಾ ಪಟ್ಟಣದ ಸಾಯಿ ಡಾಬಾ ಬಳಿ ಬೈಕ್ ಮತ್ತು ಆಕ್ಟಿವಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಅಪಘಾತದಲ್ಲಿ ಶಿರಾದ ಎಮ್ಮೆರಳ್ಳಿ ತಾಂಡಾದ ವಿಷ್ಣು (28), ರಾಮನಗರದ ಮುತ್ತುರಾಜ್ (36) ಹಾಗೂ ವೆಂಕಟಧನ ಶೆಟ್ಟಿ (64) ಮೃತಪಟ್ಟಿದ್ದಾರೆ. ವಿಷ್ಣು ಬೈಕಿನಲ್ಲಿ ಪ್ರಯಾಣಿಸುತ್ತಿದ್ದಾಗ ಎದುರಿನಿಂದ ಬಂದ ಹೋಂಡಾ ಆಕ್ಟಿವಾ ಡಿಕ್ಕಿ ಹೊಡೆದಿದೆ. ಪರಿಣಾಮ, ಆಕ್ಟಿವಾದಲ್ಲಿದ್ದ ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡರೆ, ಗಂಭೀರವಾಗಿ ಗಾಯಗೊಂಡ ವಿಷ್ಣು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ.

ಈ ದುರಂತದ ನಂತರ ಶಿರಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ತನಿಖೆ ಮುಂದುವರೆದಿದೆ.