ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹುನಿರೀಕ್ಷಿತ ತುಂಗಭದ್ರಾ ಜಲಾಯಶಯದ 33 ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ ಇಂದು ನೆರವೇರಿದೆ.
ಮೂರು ರಾಜ್ಯಗಳ ಸಿಎಂಗಳ ಹಸ್ತದಿಂದ ಉದ್ಘಾಟನೆ ನಡೆದಿದ್ದು, ಇತಿಹಾಸದಲ್ಲೇ ಎರಡನೇ ಅತಿದೊಡ್ಡ ಕಾರ್ಯಕ್ರಮ ಇದಾಗಿದೆ. ಮದುವಣಗಿತ್ತಿಯಂತೆ ಅಲಂಕೃತಗೊಂಡಿರುವ ಟಿಬಿ ಡ್ಯಾಮ್‌ನ್ನು ಕಣ್ತುಂಬಿಕೊಳ್ಳಲು ಜನಸಾಗರವೇ ಸೇರಿದೆ.
ಈ ಕಾರ್ಯಕ್ರಮ ಇತಿಹಾಸದಲ್ಲೇ ನಡೆದ ಎರಡನೇ ಬೃಹತ್ ಕಾರ್ಯಕ್ರಮವಾಗಿದೆ. 1953ರಲ್ಲಿ ಅಂದಿನ ಪ್ರಧಾನಿ ಜವಾಹರಲಾಲ್ ನೆಹರು ತುಂಗಭದ್ರಾ ಜಲಾಶಯವನ್ನು ಲೋಕಾರ್ಪಣೆ ಮಾಡಲು ಆಗಮಿಸಿದ್ದು ಮೊದಲ ಬೃಹತ್ ಕಾರ್ಯಕ್ರಮವಾಗಿತ್ತು.
ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಹಾಗೂ ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್ ಈ ಕಾರ್ಯಕ್ರಮವನ್ನು ಉದ್ಘಾಟಿಸಿದ್ದಾರೆ. ಇದರ ಜೊತೆ ಸಚಿವರು, ಸಂಸದರು ಹಾಗೂ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಲೋಕಾರ್ಪಣೆ ನಂತರ ಮೂರು ರಾಜ್ಯದ ಮುಖ್ಯಮಂತ್ರಿಗಳು ರಸ್ತೆ ಮಾರ್ಗವಾಗಿ ಮುನಿರಾಬಾದಿಗೆ ಆಗಮಿಸಿ ಇಲ್ಲಿನ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ನಡೆಯಲ್ಲಿರುವ ಸಾರ್ವಜನಿಕ ಸಭೆಯಲ್ಲಿ ರೈತರು ಹಾಗೂ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಮೂರು ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಸಚಿವರು ಮುನಿರಾಬಾದ್‌ಗೆ ಆಗಮಿಸುತ್ತಿರುವ ಹಿನ್ನೆಲೆ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.



