ತುಂಗಭದ್ರಾ ಡ್ಯಾಮ್‌ ಹೊಸ ಕ್ರಸ್ಟ್ ಗೇಟ್ ಕೆಲಸ ಆರಂಭ: ಪೂಜೆ ನೆರವೇರಿಸಿದ ಸಚಿವ ಜಮೀರ್ ಅಹ್ಮದ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕೊಪ್ಪಳ ಜಿಲ್ಲೆ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿದ್ದು ಅದರ ರಿಪೇರಿ ಕೆಲಸಕ್ಕೆ ಇಂದು ಬುಧವಾರ ಪೂಜೆ ನೆರವೇರಿಸುವ ಮೂಲಕ ಕೆಲಸ ಆರಂಭವಾಗಿದೆ.

ಹೊಸ ಕ್ರೆಸ್ಟ್ ಗೇಟ್ ಅಳವಡಿಸುವ ಕಾಮಗಾರಿ ಇಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ನೇತೃತ್ವದಲ್ಲಿ ಆರಂಭವಾಗಿದೆ. ಕಳೆದ ಭಾನುವಾರ 19ನೇ ಕ್ರಸ್ಟ್ ಗೇಟ್ ಮುರಿದಿತ್ತು.

ಕ್ರಸ್ಟ್ ಗೇಟ್ ರಿಪೇರಿ ಮಾಡಲು ಡ್ಯಾನಲ್ಲಿನ ನೀರನ್ನು ಹಂತಹಂತವಾಗಿ ಖಾಲಿ ಮಾಡಲು ಸಿಬ್ಬಂದಿ ಮಾಡುತ್ತಿದ್ದಾರೆ. ಡ್ಯಾಂ ನೀರನ್ನು ನದಿಗೆ ಹರಿಸಲಾಗುತ್ತಿದೆ. ನದಿ ಪಾತ್ರದ ಜನರು ಸುರಕ್ಷಿತವಾಗಿರುವಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಹಾಗೂ ಯಾವುದೇ ಕಾರಣಕ್ಕೂ ನದಿಗೆ ಇಳಿಯದಂತೆ ಟಿಬಿ ಬೋರ್ಡ್ ಜಿಲ್ಲಾಡಳಿತ ಸೂಚನೆ ನೀಡಿದೆ. ನದಿ ಸಮೀಪಕ್ಕೆ ಮಕ್ಕಳನ್ನು, ಜಾನುವಾರುಗಳು ಹೋಗದಂತೆ ಎಚ್ಚರವಹಿಸಿ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!