ವಿದ್ಯುತ್ ದೀಪಾಲಂಕಾರದ ನಡುವೆ ಕಣ್ಮನ ಸೆಳೆದ ತುಂಗಭದ್ರಾ ಜಲಾಶಯ

ಹೊಸದಿಗಂತ ವರದಿ,ವಿಜಯನಗರ:

ಹೊಸಪೇಟೆಯ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಗುರುವಾರ ಸಂಜೆ ಡ್ಯಾಂನ ೩೦ ಗೇಟ್‌ಗಳ ಮೂಲಕ ನದಿಗೆ ನೀರು ಹರಿಸಲಾಗುತ್ತಿದೆ. ಜೊತೆಗೆ ಕ್ರಸ್ಟ್ ಗೇಟ್‌ಗಳಿಗೆ ವಿದ್ಯುತ್ ದೀಪಾಲಂಕಾರದ ಮಧ್ಯೆ ಧುಮ್ಮುಕ್ಕುವ ನೀರಿನ ದೃಶ್ಯ ಕಣ್ಮನ ಸೆಳೆಯುತ್ತಿದೆ.

ಮಲೆನಾಡು ಹಾಗೂ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಮುಂದುವರಿದಿದ್ದರಿoದ ಜಲಾಶಯಕ್ಕೆ ಗುರುವಾರ ಸಂಜೆ ವೇಳೆಗೆ ೮೧೦೩೦ ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಜಲಾಶಯದ ನೀರಿನ ಮಟ್ಟ ೧೬೩೩ ಅಡಿಗಳ ಪೈಕಿ ೧೬೩೨.೨೦ ಅಡಿಗೆ ತಲುಪಿದೆ. ೧೦೫.೭೮೮ ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ೧೦೨.೫೭೬ ಟಿಎಂಸಿ ಅಡಿ ಸಂಗ್ರಹವಾಗಿದೆ.

ಬುಧವಾರ ಸಂಜೆ ೧೦ ಗೇಟ್‌ಗಳನ್ನು ತೆರೆಯಲಾಗಿತ್ತು, ಆದರೆ, ಒಳ ಹರಿವು ಗಣನೀಯವಾಗಿ ಏರಿಕೆಯಾಗುತ್ತಿದ್ದರಿಂದ ಗುರುವಾರ ಬೆಳಗ್ಗೆಯಿಂದ ಹಂತ ಹಂತವಾಗಿ ೨೦ ಗೇಟ್‌ಗಳನ್ನು ತೆರೆಯಲಾಗಿದೆ. ಸದ್ಯ ೩೦ ಗೇಟ್‌ಗಳಿಂದ ನದಿಗೆ ನೀರು ಹರಿಸಲಾಗುತ್ತಿದೆ.

ಅಲ್ಲದೇ, ತುಂಗಾ ನದ ಹಾಗೂ ವರದಾ ನದಿಯಿಂದ ಅಪಾರ ಪ್ರಮಾಣದ ನೀರು ತುಂಗಭದ್ರಾ ಜಲಾಶಯಕ್ಕೆ ಹರಿದು ಬರುತ್ತಿರುವುದರಿಂದ ಯಾವುದೇ ಕ್ಷಣದಲ್ಲಿ ಜಲಾಶಯದ ಒಳ ಹರಿವು ೧ ಲಕ್ಷ ಕ್ಯೂಸೆಕ್‌ಗೆ ತಲುಪುವ ಸಾಧ್ಯತೆಗಳಿದ್ದು, ಅಷ್ಟೇ ಪ್ರಮಾಣದಲ್ಲಿ ನದಿಗೆ ನೀರು ಹರಿಸಲಾಗುತ್ತದೆ ಎಂದು ತುಂಗಭದ್ರಾ ಮಂಡಳಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!