ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣದಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗದ ಮೇಲ್ಛಾವಣಿ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ 16 ದಿನಗಳ ಬಳಿಕ ಓರ್ವ ಕಾರ್ಮಿಕನ ಶವ ಪತ್ತೆಯಾಗಿದ್ದು, ಇನ್ನೂ 7 ಕಾರ್ಮಿಕರನ್ನು ಪತ್ತೆಹಚ್ಚಬೇಕಿದೆ.
ಮೃತ ಕಾರ್ಮಿಕನನ್ನು ಗುರುಪ್ರೀತ್ ಸಿಂಗ್ ಎಂದು ಗುರುತಿಸಲಾಗಿದ್ದು, ತೆಲಂಗಾಣ ಸಿಎಂ ಎ.ರೇವಂತ್ ರೆಡ್ಡಿ ಹಾಗೂ ನೀರಾವರಿ ಸಚಿವ ಎನ್ ಉತ್ತಮ್ ಕುಮಾರ್ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಸ್ಥರಿಗೆ 25 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಕಳೆದ 17 ದಿನಗಳಿಂದ ಹಗಲು, ರಾತ್ರಿ ಕಾರ್ಯಾಚರಣೆ ನಡೆಯುತ್ತಿದೆ.