ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ ಪರಿಶೀಲನೆ: ನಿತಿನ್ ಗಡ್ಕರಿ ಭರವಸೆ

ಹೊಸ ದಿಗಂತ ವರದಿ, ಶಿವಮೊಗ್ಗ:

ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣ ಸಂಬಂಧ ಪರಿಶೀಲನೆ ನಡೆಸಲಾಗುವುದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಪ್ರಾಕಾರ ಮತ್ತು ಲೋಕೋಪಯೋಗಿ ಇಲಾಖೆಗಳ ಸಹಯೋಗದಲ್ಲಿ ಇಲ್ಲಿನ ನೆಹರೂ ಕ್ರೀಡಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಅವರು ಆಗುಂಬೆ ಘಾಟಿಯಲ್ಲಿ ಆಗುತ್ತಿರುವ ಸಮಸ್ಯೆ ಹಾಗೂ ಅಲ್ಲಿ ಸುರಂಗ ಮಾರ್ಗ ನಿರ್ಮಾಣ ಮಾಡಲು ಅವಕಾಶಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತೇನೆ. ನಂತರ ಸುರಂಗ ನಿರ್ಮಾಣದ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ, ಬಳ್ಳಾರಿ ಸಂಸದ ದೇವೇಂದ್ರಪ್ಪ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಎಸ್.ರುದ್ರೇಗೌಡ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಎಸ್ಪಿ ಮಿಥುನ್‌ಕುಮಾರ್, ಜಿಪಂ ಸಿಇಒ ಸ್ನೇಹಲ್ ಸುಧಾಕರ ಲೋಖಂಡೆ ಇನ್ನಿತರರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!