ಪ್ರಕ್ಷುಬ್ಧ ಕಡಲು, ಹಲವೆಡೆ ಭಾರೀ ಮಳೆ: ಹವಾಮಾನ ಇಲಾಖೆ ನೀಡಿದೆ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:
ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡಿರುವ ವಾಯುಭಾರ ಕುಸಿತದ ಪರಿಣಾಮ ಕೇರಳದ ವಿವಿಧ ಜಿಲ್ಲೆಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ನಷ್ಷರಿಕೆ ನೀಡಿದೆ.
ಈ ಹಿನ್ನೆಲೆಯಲ್ಲಿ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಎರ್ನಾಕುಳಂ ಮತ್ತು ಇಡುಕ್ಕಿ ಮತ್ತು ಪಾಲಕ್ಕಾಡ್ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ನಡುವೆ ಕಡಲು ಪ್ರಕ್ಷುಬ್ಧಗೊಳ್ಳುವ ಸಾಧ್ಯತೆಯಿದ್ದು, ರಾತ್ರಿ 11.30ರ ಸುಮಾರಿಗೆ ಕೇರಳ ಕರಾವಳಿಯಲ್ಲಿ ಬಿರುಗಾಳಿ ಸಾಧ್ಯತೆ ಕಂಡುಬಂದಿದ್ದು, ಹೆದ್ದೆರೆಗಳು ತೀರಕ್ಕೆ ಅಪ್ಪಳಿಸುವ ಸಾಧ್ಯತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮೀನುಗಾರರು ಮತ್ತು ಕರಾವಳಿ ನಿವಾಸಿಗಳು ಜಾಗರೂಕರಾಗಿರಬೇಕು ಎಂದು ಇಲಾಖೆ ಎಚ್ಚರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!