ಟರ್ಕಿ ಸ್ಕೀ ರೆಸಾರ್ಟ್‌ನಲ್ಲಿ ಅಗ್ನಿ ದುರಂತ: ಸಾವಿನ ಸಂಖ್ಯೆ 76ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟರ್ಕಿಯ ಸ್ಕೀ ರೆಸಾರ್ಟ್‌ನಲ್ಲಿರುವ ಹೊಟೇಲ್ ನಲ್ಲಿ ಮಂಗಳವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 76ಕ್ಕೆ ಏರಿಕೆಯಾಗಿದೆ. 51 ಮಂದಿ ಗಾಯಗೊಂಡಿದ್ದಾರೆ.

ಶಾಲೆ ಸೆಮಿಸ್ಟರ್‌ ಹಾಲಿಡೇಸ್‌ ಸಮಯದಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದಾಗಲೇ ಈ ಘಟನೆ ನಡೆದಿದೆ. 12 ಅಂತಸ್ತಿನ ಹೋಟೆನಲ್ಲಿ 234 ಅತಿಥಿಗಳಿಗೆ ಆತಿಥ್ಯ ವಹಿಸಲಾಗಿತ್ತು. ಸದ್ಯ ತನಿಖೆ ಆರಂಭಿಸಿರುವ ಸ್ಥಳೀಯ ಪೊಲೀಸ್‌ ಅಧಿಕಾರಿಗಳು ಅಗ್ನಿ ಅವಘಡಕ್ಕೆ ನಿಖರ ಕಾರಣ ಏನೇಂಬುದನ್ನು ಪರಿಶೀಲಿಸುತ್ತಿದ್ದಾರೆ. .

ರಾಜಧಾನಿ ಅಂಕಾರಾದ ವಾಯುವ್ಯಕ್ಕೆ 170 ಕಿಲೋಮೀಟರ್ (100 ಮೈಲುಗಳು) ದೂರದಲ್ಲಿರುವ ಕರ್ತಲ್ಕಯಾ ರೆಸಾರ್ಟ್‌ಗೆ ಹಲವಾರು ಸಚಿವರು ಧಾವಿಸಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಘಟನೆಗೆ ಆಂತರಿಕ ಸಚಿವ ಅಲಿ ಯೆರ್ಲಿಕಾಯಾ ವಿಷಾದ ವ್ಯಕ್ತಪಡಿಸಿದ್ದಾರೆ .

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!