ಹೊಸದಿಗಂತ ಡಿಜಿಟಲ್ ಡೆಸ್ಕ್:
ಟರ್ಕಿ ಭೂಕಂಪದಿಂದ ಮೃತಪಟ್ಟವರ ಸಂಖ್ಯೆ 34 ಸಾವಿರಕ್ಕೇರಿದ್ದು, ಇದೀಗ ಬಿಲ್ಡಿಂಗ್ ಕಾಂಟ್ರಾಕ್ಟರ್‌ಗಳಿಗೆ ಬಂಧನ ಭೀತಿ ಎದುರಾಗಿದೆ.
ಈಗಲೂ ಕಟ್ಟಡಗಳ ಅವಶೇಷಗಳನ್ನು ಸಂಪೂರ್ಣವಾಗಿ ತೆರವು ಮಾಡಲು ಸಾಧ್ಯವಾಗಿಲ್ಲ, ಹಾಗಾಗಿ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಆತಂಕ ಎದುರಾಗಿದೆ. ಈ ಮಧ್ಯೆ ಟರ್ಕಿ ಒಂದರಲ್ಲೇ ಮೂವತ್ತು ಸಾವಿರ ಮಂದಿ ಮೃತಪಟ್ಟಿದ್ದು, ಎತ್ತೆತ್ತರದ ಕಟ್ಟಡಗಳನ್ನು ಕಟ್ಟಿದ ಕಾಂಟ್ರಾಕ್ಟರ್‌ಗಳಿಗೆ ಭೀತಿ ಎದುರಾಗಿದೆ.
ದುರ್ಬಲ ಕಟ್ಟಡಗಳ ನಿರ್ಮಾಣವೇ ಕುಸಿತಕ್ಕೆ ಕಾರಣ ಎನ್ನಲಾಗಿದ್ದು, ಟರ್ಕಿ ಆಡಳಿತ ಕಾಂಟ್ರಾಕ್ಟರ್‌ಗಳ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ. ಕಟ್ಟಗಳ ನಿರ್ಮಾಣ ಗುತ್ತಿಗೆದಾರರೂ ಸೇರಿದಂತೆ 12 ಮಂದಿಯನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ.
113 ಅರೆಸ್ಟ್ ವಾರೆಂಟ್ ಹೊರಡಿಸಲಾಗಿದ್ದು, ಸರ್ಕಾರದ ಈ ನಡೆಯನ್ನು ಕೆಲವರು ಕಟುವಾಗಿ ಟೀಕಿಸಿದ್ದಾರೆ, ತನ್ನ ಜವಾಬ್ದಾರಿಯನ್ನು ತಪ್ಪಿಸಿಕೊಳ್ಳಲು ಈ ರೀತಿ ಸರ್ಕಾರ ನೆಪ ಹೇಳುತ್ತಿದೆ ಎಂದು ಆರೋಪಿಸಲಾಗಿದೆ.