ಹೊಸದಿಗಂತ ಡಿಜಿಟಲ್ ಡೆಸ್ಕ್ :
ಟರ್ಕಿ, ಸಿರಿಯಾದಲ್ಲಿ ಸಂಭವಿಸಿದ ಭೂಕಂಪನದಲ್ಲಿ ಸಾವಿನ ಸಂಖ್ಯೆಯನ್ನು 1,300 ಕ್ಕೂ ಅಧಿಕವಾಗಿದ್ದು, ಇದುವರೆಗೆ 2,470 ಜನರನ್ನು ಅವಶೇಷಗಳಿಂದ ರಕ್ಷಿಸಲಾಗಿದೆ.
7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಹಲವಾರು ಕಟ್ಟಡಗಳು ನೆಲಸಮವಾಗಿವೆ.
ನೂರ್ಡಗಿ ಪಟ್ಟಣದಿಂದ ಸುಮಾರು 26 ಕಿಲೋಮೀಟರ್ (16 ಮೈಲಿ) ದೂರದಲ್ಲಿರುವ ಗಾಜಿಯಾಂಟೆಪ್‌ನಿಂದ 33 ಕಿಲೋಮೀಟರ್ (20 ಮೈಲಿ) ದೂರದಲ್ಲಿ ಭೂಕಂಪನ ಕೇಂದ್ರ ಬಿಂದು ಇದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ.
ಯುರೋಪಿಯನ್ ಯೂನಿಯನ್ ರಕ್ಷಣಾ ತಂಡಗಳನ್ನು ಕಳುಹಿಸುತ್ತಿದೆ ಮತ್ತು ಟರ್ಕಿಗೆ ಹೆಚ್ಚಿನ ಸಹಾಯವನ್ನು ನೀಡುತ್ತಿದೆ ಎಂದು ವಿಪತ್ತು ನಿರ್ವಹಣಾ ಆಯುಕ್ತರು ತಿಳಿಸಿದ್ದಾರೆ.
ಇತ್ತ ಪ್ರಬಲ ಕಂಪನಕ್ಕೆ ತತ್ತರಿಸಿದ ಟರ್ಕಿ ಗೆ ಭಾರತ ಸಹಿತ ಅನೇಕ ದೇಶಗಳು ಸಹಾಯ ಹಸ್ತ ಚಾಚಿದೆ.