April 30, 2026
Thursday, April 30, 2026
spot_img

ಟರ್ಕಿಶ್ ಏರ್‌ಲೈನ್ಸ್ ಕೋಲ್ಕತ್ತಾ ಏರ್‌ಪೋರ್ಟ್‌ನಲ್ಲಿ ತುರ್ತು ಭೂಸ್ಪರ್ಶ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟರ್ಕಿಶ್ ಏರ್‌ಲೈನ್ಸ್ ಪ್ರಯಾಣಿಕ ವಿಮಾನ ಬುಧವಾರ ಮಧ್ಯಾಹ್ನ ಟೇಕಾಫ್ ಆದ ಕೆಲವೇ ಗಂಟೆಯಲ್ಲಿ ಪಶ್ಚಿಮ ಬಂಗಾಳದ ಕೋಲ್ಕತ್ತಾ ಏರ್ ಪೋರ್ಟ್ ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

THY 727 ಟರ್ಕಿಶ್ ಏರ್‌ಲೈನ್ಸ್ ವಿಮಾನ ಕಠ್ಮಂಡುವಿನಿಂದ ಇಸ್ತಾನ್‌ಬುಲ್‌ಗೆ ತೆರಳುತ್ತಿತ್ತು. ಈ ವೇಳೆ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹೀಗಾಗಿ ವಿಮಾನವು ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಪೈಲಟ್ ಕೋಲ್ಕತ್ತಾ ಏರ್ ಟ್ರಾಫಿಕ್ ಕಂಟ್ರೋಲ್ ನ್ನು ಸಂಪರ್ಕಿಸಿದ್ದಾರೆ. ಎಟಿಸಿ ಗ್ರೀನ್ ಸಿಗ್ನಲ್ ನೀಡುತ್ತಿದ್ದಂತೆಯೇ ಕೋಲ್ಕತ್ತಾ ಏರ್ ಪೋರ್ಟ್ ನಲ್ಲಿ ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡಲಾಯಿತು. ವಿಮಾನದಲ್ಲಿದ್ದ 236 ಪ್ರಯಾಣಿಕರು ಹಾಗೂ ಸಿಬ್ಬಂದಿಗಳು ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !