ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾಗಿ ತುಷಾರ್ ಗಿರಿನಾಥ್ ಅವರನ್ನು ನೇಮಕ ಮಾಡಲಾಗಿದೆ. ಹಾಲಿ ಆಯುಕ್ತರಾಗಿದ್ದ ಗೌರವ್ ಗುಪ್ತಾರನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.
ಗೌರವ್ ಗುಪ್ತಾ ಅವರನ್ನು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಇತ್ತೀಚೆಗೆ ಬಿಬಿಎಂಪಿಯಲ್ಲೂ ಶೇ 40 ಕಮೀಷನ್ ಆರೋಪಗಳ ಸುರಿಮಳೆ ಬಂದಿತ್ತು. ಅವೈಜ್ಞಾನಿಕ ಕಾಮಗಾರಿಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಮಂದಗತಿ ಆರೋಪಗಳು ಕೇಳಿ ಬಂದಿದ್ದವು.ಇದರ ಬೆನ್ನಲ್ಲೇ ಇದೀಗ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.