September 27, 2026
Sunday, September 27, 2026
spot_img

ಟಿವಿಕೆ ಸರ್ಕಾರದಿಂದ ವಿಪಕ್ಷವನ್ನು ದುರ್ಬಲಗೊಳಿಸುವ ಯತ್ನ: ಸಿಎಂ ವಿಜಯ್ ವಿರುದ್ಧ ಎಂ.ಕೆ. ಸ್ಟಾಲಿನ್ ವಾಗ್ದಾಳಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡು ಸಿಎಂ ಸಿ.ಜೋಸೆಫ್ ವಿಜಯ್ ವಿರುದ್ಧ ಡಿಎಂಕೆ ಮುಖ್ಯಸ್ಥ, ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ವಾಗ್ದಾಳಿ ನಡೆಸಿದ್ದು, ಟಿವಿಕೆ ಸರ್ಕಾರವು ವಿಪಕ್ಷವನ್ನು ದುರ್ಬಲಗೊಳಿಸಲು ಯತ್ನಿಸುತ್ತಿದೆ ಎಂದು ಟೀಕಿಸಿದ್ದಾರೆ.

ಬಿಜೆಪಿಯಂತೆ ಸಿಎಂ ವಿಜಯ್ ನಡೆ

ಡಿಎಂಕೆ ಮುಖ್ಯ ಕಚೇರಿ ಅಣ್ಣಾ ಅರಿವಾಲಯಂನಲ್ಲಿ ನಡೆದ ಡಿಎಂಕೆ ಮಹಿಳಾ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ಇತರ ರಾಜ್ಯಗಳಲ್ಲಿ ಮಾಡುತ್ತಿರುವಂತೆಯೇ, ಸಿಎಂ ವಿಜಯ್ ತಮಿಳುನಾಡಿನಲ್ಲಿ ವಿರೋಧ ಪಕ್ಷವನ್ನು ದುರ್ಬಲಗೊಳಿಸುವ ಪ್ರಯತ್ನದ ಭಾಗವಾಗಿ ಎಐಎಡಿಎಂಕೆ ಶಾಸಕರನ್ನು ಖರೀದಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕಾರ್ಯಕರ್ತರ ಮೇಲೆ ನಂಬಿಕೆಯಿಲ್ಲ

ಈ ಹಿಂದೆ ಬಹುಮತ ಸಾಬೀತುಪಡಿಸುವ ಸಮಯದಲ್ಲಿ ಸರ್ಕಾರ ಕಾಪಾಡಿಕೊಳ್ಳಲು ಎಐಎಡಿಎಂಕೆ ಶಾಸಕರನ್ನು ತಮ್ಮ ಪರ ಮತ ಚಲಾಯಿಸುವಂತೆ ಮಾಡಿದರು. ಬಳಿಕ ರಾಜೀನಾಮೆ ಕೊಡಿಸಿ ತಮ್ಮ ಪಕ್ಷಕ್ಕೆ ಸೇರಿಸಿಕೊಂಡರು. ಇವರಿಗೆ ಸ್ವಂತ ಪಕ್ಷದ ಕಾರ್ಯಕರ್ತರ ಮೇಲೆ ನಂಬಿಕೆಯಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Must Read