Sunday, August 14, 2022

Latest Posts

ಕನ್ನಡದಲ್ಲಿಯೇ ಟ್ವೀಟ್ ಮಾಡಿ ‘ಕನ್ನಡ ರಾಜ್ಯೋತ್ಸವ’ದ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಇಂದು 66ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ನಾಡಿನೆಲ್ಲೆಡೆ ಮನೆ ಮಾಡಿದ್ದು. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಜನತೆಗೆ ಕನ್ನಡದಲ್ಲಿಯೇ ಶುಭಾಶಯ ತಿಳಿಸಿದ್ದಾರೆ.

ಈ ಕುರಿತು ಕನ್ನಡದಲ್ಲಿ ಟ್ವೀಟ್ ಮಾಡಿರುವ ಮೋದಿ, ‘ಕರ್ನಾಟಕ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಶುಭ ಹಾರೈಕೆಗಳು. ಕರ್ನಾಟಕವು ತನ್ನ ಜನರ ಹೊಸತನದ ಶೋಧದ ತುಡಿತದಿಂದಾಗಿ ವಿಶೇಷ ಛಾಪು ಮೂಡಿಸಿದೆ. ರಾಜ್ಯವು ಅತ್ಯುತ್ಕೃಷ್ಟ ಸಂಶೋಧನೆ ಮತ್ತು ಉದ್ಯಮಶೀಲತೆಯಿಂದಾಗಿ ಮುಂಚೂಣಿಯಲ್ಲಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ” ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss