ಮೋರ್ಬಿ ಸೇತುವೆ ದುರಂತದ ಕುರಿತು ಟ್ವೀಟ್: TMC ವಕ್ತಾರ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೋರ್ಬಿ ಸೇತುವೆ ದುರಂತದ ಕುರಿತು ಟ್ವೀಟ್ ಮಾಡಿದ ತೃಣಮೂಲ ಕಾಂಗ್ರೆಸ್ ವಕ್ತಾರ ಸಾಕೇತ್ ಗೋಖಲೆ ಅವರನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ.

ಗೋಖಲೆ ಅವರ ಇತ್ತೀಚಿನ ಟ್ವೀಟ್‌ನಲ್ಲಿ`ಆರ್‌ಟಿಐ (ಮಾಹಿತಿ ಹಕ್ಕು ಕಾಯ್ದೆ) ಮಾಹಿತಿ ಪ್ರಕಾರ ಪ್ರಧಾನಿ ಅವರು ಮೋರ್ಬಿಗೆ ಭೇಟಿ ನೀಡಲು ಖರ್ಚಾಗಿದ್ದು 30 ಕೋಟಿ ರೂ.’ ಎಂದು ಉಲ್ಲೇಖಿಸಿದ್ದರು. ಈ ಕುರಿತು ಪ್ರೆಸ್ ಇನ್ಫರ್ಮೇಷನ್ ಬ್ಯೂರೋ ಸತ್ಯ ಪರಿಶೀಲನೆ ನಡೆಸಿ ಆರ್‌ಟಿಐ ಮಾಹಿತಿ ಸುಳ್ಳು ಎಂದು ಹೇಳಿತ್ತು.

 

ಸಾಕೇತ್ ಗೋಖಲೆ ಅವರು ನಿನ್ನೆ ರಾತ್ರಿ ದೆಹಲಿಯಿಂದ ರಾಜಸ್ಥಾನದ ಜೈಪುರಕ್ಕೆ ವಿಮಾನದಲ್ಲಿ ತೆರಳಿದ್ದರು. ಅಲ್ಲಿಂದ ಗುಜರಾತ್ ಪೊಲೀಸರ್ ಬಂಧಿಸಿ ಕರೆದೊಯ್ದಿದ್ದಾರೆ ಎಂದು ಟಿಎಂಸಿ ನಾಯಕರೊಬ್ಬರು ತಿಳಿಸಿದ್ದಾರೆ.

ಆದರೆ ಇದರಿಂದ ಮಮತಾ ಬ್ಯಾನರ್ಜಿ ಅವರು ಬಿಜೆಪಿ ಹಾಗೂ ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ಹೊರಹಾಕಿದ್ದು, ಇದು ರಾಜಕೀಯ ಸೇಡು ಎಂದು ಕಿಡಿ ಕಾರಿದ್ದಾರೆ.

ಕಳೆದ ಅಕ್ಟೋಬರ್ 30 ರಂದು ಗುಜರಾತಿನ ಮೋರ್ಬಿ ಜಿಲ್ಲೆಯಲ್ಲಿ ತೂಗು ಸೇತುವೆ ಕುಸಿದು 135 ಜನರು ಮೃತಪಟ್ಟಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!