ಇರಾನ್ ನಲ್ಲಿ ಅವಳಿ ಬಾಂಬ್ ಸ್ಫೋಟ: 100ಕ್ಕೂ ಹೆಚ್ಚು ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಇರಾನ್ ಕಮಾಂಡರ್ ಖಾಸಿಮ್ ಸೂಲೈಮಾನಿ ಅವರ ಸ್ಮರಣಾರ್ಥ ಕಾರ್ಯಕ್ರಮದ ಮೇಲೆ ಉಗ್ರರು ನಡೆಸಿದ ಅವಳಿ ಬಾಂಬ್ ಸ್ಫೋಟದಲ್ಲಿ 100ಕ್ಕೂ ಹೆಚ್ಚು ಮಂದಿ ಸಾವನ್ನಪಿದ್ದಾರೆ.

ಇರಾನ್ ಮಾಧ್ಯಮಗಳ ಪ್ರಕಾರ, 103 ಮಂದಿ ಸಾವನ್ನಪ್ಪಿದ್ದು, 141 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

2020ರಲ್ಲಿ ಯುಎಸ್ ಡ್ರೋಣ್ ದಾಳಿಯಲ್ಲಿ ಖಾಸಿಮ್ ಸೂಲೈಮಾನಿ ಮೃತಪಟ್ಟಿದ್ದರು. ಅವರ ಸ್ಮರಣಾರ್ಥ ನಡೆಯುತ್ತಿದ್ದ ಸಮಾರಂಭದ ಮೇಲೆ ಉಗ್ರರು ಗುರಿಯಾಗಿಸಿ ದಾಳಿ ನಡೆಸಿದ್ದಾರೆ.

ದಾಳಿಯನ್ನು ಯಾವುದೇ ಸಂಘಟನೆ ಇನ್ನೂ ಹೊತ್ತುಕೊಂಡಿಲ್ಲ. ಘಟನಾ ಸ್ಥಳಕ್ಕೆ ಭದ್ರತಾ ಸಿಬ್ಬಂದಿ ಆಗಮಿಸಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!