ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಂಡೀಗಢದ ಎರಡು ನೈಟ್‌ಕ್ಲಬ್‌ಗಳ ಬಳಿ ಅವಳಿ ಸ್ಫೋಟ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ, ಸ್ಫೋಟದಿಂದಾಗಿ ಹಲವಾರು ಕಿಟಕಿ ಗಾಜುಗಳಿಗೆ ಹಾನಿಯಾಗಿದೆ.
ಕಚ್ಚಾ ಬಾಂಬ್‌ಗಳಿಂದ ಸ್ಫೋಟಗಳು ಸಂಭವಿಸಿವೆ ಎಂದು ಹೇಳಲಾಗುತ್ತಿದೆ, ಮಂಗಳವಾರ ಮುಂಜಾನೆ 4 ಗಂಟೆ ಸುಮಾರಿಗೆ ಮೋಟಾರ್‌ಸೈಕಲ್‌ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ನೈಟ್‌ಕ್ಲಬ್‌ಗಳ ಮೇಲೆ ಕಡಿಮೆ ತೀವ್ರತೆಯ ಬಾಂಬ್ ಎಸೆದ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದೆ.
ಚಂಡೀಗಢ ಪೊಲೀಸರ ವಿಧಿವಿಜ್ಞಾನ ತಂಡಗಳು ಪ್ರಸ್ತುತ ಈ ಬಗ್ಗೆ ತನಿಖೆ ನಡೆಸುತ್ತಿವೆ. ಈ ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಇದು ಬಾಂಬ್ ಅಥವಾ ಇನ್ನಾವುದೇ ಸ್ಫೋಟಕ ವಸ್ತುವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ವಿಧಿವಿಜ್ಞಾನ ತಜ್ಞರು ಮತ್ತು ಇತರ ತನಿಖಾ ಸಂಸ್ಥೆಗಳು ಸೇರಿದಂತೆ ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ. ಪೊಲೀಸರು ಎಲ್ಲಾ ಕಡೆಯಿಂದ ಈ ಸಂಪೂರ್ಣ ಪ್ರದೇಶವನ್ನು ಸುತ್ತುವರೆದಿದ್ದಾರೆ.