May 11, 2026
Monday, May 11, 2026
spot_img

ಬಂಗಾಳ ಸಿಎಂ ಆಪ್ತನ ಹ*ತ್ಯೆ ಪ್ರಕರಣಕ್ಕೆ ಟ್ವಿಸ್ಟ್: UPIನಿಂದ ಸಿಕ್ತು ಕ್ಲೂ, ಮೂವರು ಅಂದರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳದಲ್ಲಿ ಸಂಚಲನ ಮೂಡಿಸಿದ್ದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಆಪ್ತ ಸಹಾಯಕನ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ.

ಪ್ರಕರಣದ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡವು ಉತ್ತರ ಪ್ರದೇಶದಿಂದ ಮೂವರು ಆರೋಪಿಗಳನ್ನು ಬಂಧಿಸಿದ್ದು, ಹತ್ಯೆ ಪೂರ್ವಯೋಜಿತವಾಗಿತ್ತು ಎಂಬ ಅನುಮಾನ ಮತ್ತಷ್ಟು ಗಟ್ಟಿಯಾಗಿದೆ.

ಮೇ 6ರಂದು ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮ್ ಪ್ರದೇಶದಲ್ಲಿ ಈ ಹತ್ಯೆ ನಡೆದಿತ್ತು. ಪ್ರಕರಣದ ತನಿಖೆಯಲ್ಲಿ ಡಿಜಿಟಲ್ ಮಾಹಿತಿ, ಯುಪಿಐ ಹಣ ವರ್ಗಾವಣೆ ಹಾಗೂ ಅಂತಾರಾಜ್ಯ ಸಂಪರ್ಕಗಳ ಸುಳಿವು ಪೊಲೀಸರಿಗೆ ಪ್ರಮುಖ ಸಾಕ್ಷಿಯಾಗಿವೆ.

ಇದನ್ನೂ ಓದಿ:

ಬಂಧಿತರಲ್ಲಿ ಒಬ್ಬನನ್ನು ಶಾರ್ಪ್‌ಶೂಟರ್ ಎಂದು ತನಿಖಾಧಿಕಾರಿಗಳು ಶಂಕಿಸಿದ್ದು, ಉಳಿದ ಆರೋಪಿಗಳಿಗೂ ಅಪರಾಧ ಜಾಲದ ಸಂಪರ್ಕವಿರುವ ಸಾಧ್ಯತೆ ವ್ಯಕ್ತವಾಗಿದೆ. ಪ್ರಕರಣದ ತನಿಖೆಗಾಗಿ ವಿಶೇಷ ತಂಡಗಳನ್ನು ಉತ್ತರ ಪ್ರದೇಶ ಹಾಗೂ ಬಿಹಾರಕ್ಕೆ ಕಳುಹಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಹತ್ಯೆ ಸಂಚಿನಲ್ಲಿ ಕನಿಷ್ಠ ಎಂಟು ಮಂದಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಬಂಧಿತ ಆರೋಪಿಗಳನ್ನು ಇದೀಗ ಪಶ್ಚಿಮ ಬಂಗಾಳಕ್ಕೆ ಕರೆತಂದು ಹೆಚ್ಚಿನ ವಿಚಾರಣೆ ನಡೆಸಲು ಸಿದ್ಧತೆ ನಡೆಯುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !