ಹೊಸದಿಗಂತ ಡಿಜಿಟಲ್ ಡೆಸ್ಕ್ :
ಚಿತ್ರದುರ್ಗದ ಮನೆಯೊಂದರಲ್ಲಿ ಐದು ಅಸ್ಥಿಪಂಜರ ದೊರಕಿದ್ದು, ಕೋಟೆನಾಡಿನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಇದೀಗ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಡೆತ್ನೋಟ್ನಲ್ಲಿ ಇಬ್ಬರು ವ್ಯಕ್ತಿಗಳ ಹೆಸರನ್ನು ಕುಟುಂಬ ಉಲ್ಲೇಖಿಸಿದೆ. ಈ ಇಬ್ಬರು ವ್ಯಕ್ತಿಗಳು ನೀಡುತ್ತಿರುವ ಚಿತ್ರಹಿಂಸೆಯಿಂದಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದೇವೆ ಎಂದು ಬರೆಯಲಾಗಿದೆ.
ಜಮೀನು ಪ್ರಕರಣದ ವಿಚಾರಣೆ ವೇಳೆ ಇಬ್ಬರು ವ್ಯಕ್ತಿಗಳು ನಮಗೆ ಹಿಂಸೆ ನೀಡುತ್ತಿದ್ದಾರೆ. ಅವರಿಂದಲೇ ಆತ್ಮಹತ್ಯೆಗೆ ಶರಣಾಗುತ್ತಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಈ ವ್ಯಕ್ತಿಗಳ ಹೆಸರನ್ನು ಪೊಲೀಸರು ಬಹಿರಂಗಗೊಳಿಸಿಲ್ಲ. ಅಲ್ಲದೇ ಡೆತ್ನೋಟ್ನಲ್ಲಿಯೂ ಸಾಕಷ್ಟು ಅನುಮಾನಗಳಿವೆ ಎಂದು ಪೊಲೀಸರು ಹೇಳಿದ್ದಾರೆ. ಸದ್ಯ ಇಬ್ಬರು ವ್ಯಕ್ತಿಗಳನ್ನು ಹುಡುಕಿ ವಿಚಾರಣೆ ನಡೆಸುವ ಬಗ್ಗೆ ಪೊಲೀಸರು ಗಮನಹರಿಸಿದ್ದಾರೆ.