ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನಟಿ ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ದೊಡ್ಡ ದೊಡ್ಡ ರಾಜಕಾರಣಿಗಳ ನಂಟಿರುವ ಶಂಕೆ ವ್ಯಕ್ತವಾಗಿದೆ.
ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ರನ್ಯಾ ರಾವ್ ಅವರನ್ನ ಬಂಧಿಸಿ DRI ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಈ ವಿಚಾರಣೆಯ ವೇಳೆ ಆರೋಪಿಯ ಈ ಕೃತ್ಯದ ಹಿಂದೆ ಹಲವು ಪ್ರಭಾವಿ ವ್ಯಕ್ತಿಗಳು ಇರುವ ಸುಳಿವು ಪತ್ತೆಯಾಗಿದೆ.ಆರೋಪಿತೆ ನಟಿ ರನ್ಯಾ ರಾವ್‌ಗೆ ಹಲವು ರಾಜಕೀಯ ನಾಯಕರ ಜೊತೆ ಸಂಪರ್ಕ ಇದೆ.
ರನ್ಯಾ ರಾವ್ ನಿರ್ದೇಶಕಿಯಾಗಿರುವ ಕಂಪನಿಗೆ ಕರ್ನಾಟಕ ಸರ್ಕಾರದಿಂದಲೇ 12 ಎಕರೆ ಜಮೀನು ಮಂಜೂರಾಗಿದೆ. ರನ್ಯಾ ಮತ್ತು ರಷಬ್ ಇಬ್ಬರು ಕೂಡ ಕಂಪನಿಯ ನಿರ್ದೇಶಕರು. ಈ ಕಂಪನಿಗೆ 2023 ರಲ್ಲಿ ಕೆಐಎಡಿಬಿಯಿಂದ ಬರೋಬ್ಬರಿ 12 ಎಕರೆ ಜಮೀನು ಮಂಜೂರು ಮಾಡಲಾಗಿದೆ.
ಸರ್ಕಾರ ಜಮೀನು ಮಂಜೂರು ಮಾಡಿರುವ ದಾಖಲೆಯಿದೆ. ಒಬ್ಬ ನಟಿ, ನಿರ್ದೇಶಕಿಯಾಗಿರುವ ಕಂಪನಿಗೆ 12 ಎಕರೆ ಜಮೀನು ಮಂಜೂರಾಗಿದ್ದು ಹೇಗೆ ಎಂಬ ಹತ್ತು ಹಲವು ಪ್ರಶ್ನೆಗಳು ಹುಟ್ಟಿಕೊಂಡಿವೆ.
ಕಳೆದ ಮೂರು ತಿಂಗಳ ಹಿಂದೆ ಬೆಂಗಳೂರಲ್ಲಿ ರನ್ಯಾ ರಾವ್ ಅದ್ಧೂರಿ ವಿವಾಹ ಮಹೋತ್ಸವ ನಡೆದಿತ್ತು. ಆ ಮದುವೆಯಲ್ಲಿ ಪ್ರಭಾವಿ ಸಚಿವರು ಭಾಗಿಯಾಗಿದ್ದರು. ಇದೀಗ ನಟಿ ರನ್ಯಾ ರಾವ್ ಬಂಧನವಾಗುತ್ತಿದ್ದಂತೆ ಆ ಸಚಿವರು ತಬ್ಬಿಬ್ಬಾಗಿದ್ದಾರೆ.