ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ತೀವ್ರ ಸಂಚಲನ ಮೂಡಿಸಿದೆ.ಕಂದಾಯ ಗುಪ್ತಚರ ನಿರ್ದೇಶನಾಲಯ (DRI) & CBI ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಇದರ ನಡುವೆ ರನ್ಯಾ ರಾವ್ ಅವರ ಮೆಸರ್ಸ್ ಕ್ಸಿರೋದ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಗೆ 12 ಎಕರೆ ಭೂಮಿ ಸರ್ಕಾರದಿಂದಲೇ ಮಂಜೂರಾಗಿದೆ ಎಂಬ ಸುದ್ದಿ ಹರಿದಾಡಿತ್ತು. ಇದೀಗ ಈ ಕುರಿತು ಮಾಹಿತಿ ನೀಡಿದ ಕೆ ಐ ಎ ಡಿ ಬಿ ಸಿಇಒ ಡಾ. ಮಹೇಶ್, 2023ರ ಜನವರಿ 2ರಂದು 12 ಎಕರೆ ಭೂಮಿ ಮಂಜೂರಾಗಿದೆ ಎಂದು ಕೆ ಐ ಎ ಡಿ ಬಿ ಸಿಇಒ ಡಾ. ಮಹೇಶ್ ಹೇಳಿದ್ದಾರೆ.
2023ರ ಜನವರಿ 2 ರಂದು ನಡೆದ 137ನೇ ರಾಜ್ಯ ಮಟ್ಟದ ಸಿಂಗಲ್ ವಿಂಡೋ ಕ್ಲಿಯರೆನ್ಸ್ ಕಮಿಟಿ (ಎಸ್ ಎಲ್ ಎಸ್ ಡಬ್ಲ್ಯು ಸಿ ಸಿ) ಸಭೆಯಲ್ಲಿ ತುಮಕೂರು ಜಿಲ್ಲೆ ಸಿರಾ ಕೈಗಾರಿಕಾ ಪ್ರದೇಶದಲ್ಲಿ ಸದರಿ ಭೂಮಿ ಮಂಜೂರಾತಿಗೆ ಈ ಅನುಮೋದನೆ ನೀಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಉಕ್ಕಿನಿಂದ ತಯಾರಿಸಲಾಗುವ ಟಿಎಂಟಿ ಪಟ್ಟಿ, ಸರಳು ಹಾಗೂ ಸಹ-ಉತ್ಪನ್ನಗಳ ಘಟಕವನ್ನು 138 ಕೋಟಿ ಹೂಡಿಕೆಯಲ್ಲಿ ಸ್ಥಾಪಿಸಲಾಗುವುದು. ಇದರಿಂದ, ಸುಮಾರು 160 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಕಂಪನಿ ಪ್ರಸ್ತಾವ ಸಲ್ಲಿಸಿತ್ತು ಎಂದೂ ಅವರು ವಿವರಿಸಿದ್ದಾರೆ.