ಪ್ರಜ್ವಲ್‌ ಕೇಸ್‌ ನಲ್ಲಿ ಟ್ವಿಸ್ಟ್: ರೇವಣ್ಣ ಆಪ್ತನ ತೋಟದ ಮನೆಯಲ್ಲಿ ಸಂತ್ರಸ್ಥೆ ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ (Prajwal Revanna Case) ಪ್ರಕರಣದಲ್ಲಿ ಪೊಲೀಸರಿಗೆ ಮಹತ್ವದ ಮುನ್ನಡೆ ಸಿಕ್ಕಿದೆ. ಪ್ರಕರಣದಲ್ಲಿ ಅಪಹರಣಕ್ಕೀಡಾಗಿದ್ದ ಸಂತ್ರಸ್ತೆಯನ್ನು ಮೈಸೂರು ಪೊಲೀಸರು ರಕ್ಷಣೆ ಮಾಡಿದ್ದಾರೆ.

ಎಚ್‌.ಡಿ.ರೇವಣ್ಣ (HD Revanna) ಆಪ್ತ ಸಹಾಯಕ ರಾಜಶೇಖರ್‌ ಅವರ ಮೈಸೂರಿನ ತೋಟದ ಮನೆಯಲ್ಲಿದ್ದ ಸಂತ್ರಸ್ತೆಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.

ಏಪ್ರಿಲ್‌ 29ರಂದು ಕೆ.ಆರ್.ನಗರದ ಮನೆಯಿಂದ ಮಹಿಳೆಯೊಬ್ಬರನ್ನು ಅಪಹರಣ ಮಾಡಿ ಅಕ್ರಮ ಬಂಧನದಲ್ಲಿಟ್ಟಿದ್ದ ಆರೋಪದ ಮೇಲೆ ಮೈಸೂರಿನ ಕೆ.ಆರ್.‌ ನಗರ ಠಾಣೆಯಲ್ಲಿ ಎಚ್‌.ಡಿ.ರೇವಣ್ಣ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಸಂತ್ರಸ್ತೆಯ ಪುತ್ರ ದೂರು ದಾಖಲಿಸಿದ್ದನು. ಈಗ ಪೊಲೀಸರು ಹುಣಸೂರು ತಾಲೂಕಿನ ಕಾಳೇನಹಳ್ಳಿಯಲ್ಲಿ ಸಂತ್ರಸ್ತೆಯನ್ನು ರಕ್ಷಣೆ ಮಾಡಿದ್ದಾರೆ. ಮಹಿಳೆಯನ್ನು ರಾಜಶೇಖರ್‌ ಕೂಡಿ ಹಾಕಿದ್ದ ಎಂದು ತಿಳಿದುಬಂದಿದೆ.

ಏಪ್ರಿಲ್‌ 29ರಿಂದಲೂ ಆಗಿಂದಲೂ ಹುಣಸೂರು ತಾಲೂಕಿನ ಕಾಳೇನಳ್ಳಿಯ ರೇವಣ್ಣ ಆಪ್ತ ಸಹಾಯಕ ರಾಜಶೇಖರ್ ತೋಟದಲ್ಲಿ ಇರಿಸಲಾಗಿತ್ತು. ರೇವಣ್ಣ ಸಂಬಂಧಿ ಸತೀಶ್ ಬಾಬು ಎಂಬಾತ ಮಹಿಳೆಯನ್ನು ಕರೆದೊಯ್ದಿದ್ದನು. ಸದ್ಯ, ಮಹಿಳೆಯನ್ನು ಬೆಂಗಳೂರಿಗೆ ಕರೆತರಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!