ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಟ್ವಿಸ್ಟ್‌: ಶಾಸಕ ಎ. ಮಂಜು ವಿರುದ್ಧ ಬೊಟ್ಟು ಮಾಡಿದ ನವೀನ್‌ ಗೌಡ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಸಿಗುತ್ತಿದೆ. ಪೆನ್‌ಡ್ರೈವ್‌ ಹಂಚಿಕೆಯ ಪ್ರಮುಖ ಆರೋಪ ಹೊತ್ತಿರುವ ನವೀನ್‌ ಗೌಡ ಈ ಸಂಬಂಧ ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಾಕಿದ್ದು, ಅರಕಲಗೂಡು ಶಾಸಕ ಎ. ಮಂಜು ಮೇಲೆ ಬೊಟ್ಟು ಮಾಡಿದ್ದಾನೆ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳುತ್ತಿರುವ ಮಹಾ ನಾಯಕ ಇವರೇ ಎಂದು ಆರೋಪ ಮಾಡಿದ್ದಾನೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾ ಫೇಸ್‌ಬುಕ್‌ನಲ್ಲಿ ನವೀನ್‌ ಗೌಡ ಹಾಕಿರುವ ಪೋಸ್ಟ್‌ನಲ್ಲಿ ಜೆಡಿಎಸ್‌ ಶಾಸಕ ಎ. ಮಂಜು ವಿರುದ್ಧ ನೇರವಾಗಿ ಆರೋಪ ಮಾಡಿದ್ದಾನೆ. ಆದರೆ, ನವೀನ್‌ ಗೌಡ ಈ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದು, ಅವರಿಗಾಗಿ ಎಸ್‌ಐಟಿಯವರು ಶೋಧ ಕಾರ್ಯ ನಡೆಸುತ್ತಿರುವುದಾಗಿ ಹೇಳಿಕೊಂಡಿದೆ. ಈ ಮಧ್ಯೆ ನವೀನ್‌ ಗೌಡ ಮಾತ್ರ ರಾಜಾರೋಷವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಅನ್ನು ಹಂಚಿಕೊಳ್ಳತೊಡಗಿದ್ದಾನೆ.

ನವೀನ್‌ ಗೌಡನ ಪೋಸ್ಟ್‌ನಲ್ಲೇನಿದೆ?
ನನಗೆ ಏಪ್ರಿಲ್20 ರಂದು ಸಿಕ್ಕ ಪೆನ್ ಡ್ರೈವ್ ಅನ್ನು ಅರಕಲಗೂಡು ಶಾಸಕ ಮಂಜು ಅವರಿಗೆ ಕೊಟ್ಟಿದ್ದೇನೆ. ಏಪ್ರಿಲ್ 21 ರಂದು ಅರಕಲಗೂಡು ಮಾರುತಿ ಕಲ್ಯಾಣ ಮಂಟಪದಲ್ಲಿ ಅವರಿಗೆ ನೀಡಿದ್ದೇನೆ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ವಿಡಿಯೊವನ್ನು ವೈರಲ್ ಮಾಡಿದ್ದರ ಹಿಂದೆ ಮಹಾ ನಾಯಕನ ಕೈವಾಡ ಇದೆ ಎಂದು ಹೇಳಿದ್ದರು. ಆ ಮಹಾ ನಾಯಕ ಅರಕಲಗೂಡು ಶಾಸಕರೇ ಇರಬಹುದು ಎಂದು ಪೋಸ್ಟ್ ಮಾಡಿದ್ದಾನೆ. ಸದ್ಯ ನವೀನ್ ಗೌಡ ಪೋಸ್ಟ್ ಎಲ್ಲೆಡೆ ವೈರಲ್ ಆಗಿದೆ.

ಈ ಮಧ್ಯೆ ಪೆನ್‌ಡ್ರೈವ್‌ ಅನ್ನು ಹಾಸನ ಜಿಲ್ಲಾದ್ಯಂತ ಹಂಚಿಕೆ ಮಾಡಿರುವ ಆರೋಪವನ್ನು ಹೊತ್ತಿರುವ ನವೀನ್‌ ಗೌಡ ಮಾಡಿರುವ ಪೋಸ್ಟ್‌ ಈಗ ಚರ್ಚೆಗೆ ಎಡೆಮಾಡಿ ಕೊಟ್ಟಿದೆ. ಈತನ ಪೋಸ್ಟ್‌ ಅನ್ನು ಆಧಾರವಾಗಿಟ್ಟುಕೊಂಡು ಎಸ್‌ಐಟಿಯವರು ಮುಂದಿನ ಕ್ರಮವನ್ನು ಕೈಗೊಂಡು ಮಂಜು ಅವರನ್ನು ವಿಚಾರಣೆಗೆ ಒಳಪಡಿಸಲಿದ್ದಾರಾ? ಇಲ್ಲವೇ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಲಿದ್ದಾರಾ? ಅಥವಾ ಈ ಪೋಸ್ಟ್‌ ಅನ್ನು ನವೀನ್‌ ಗೌಡ ಯಾವ ಐಪಿ ಅಡ್ರೆಸ್‌ನಿಂದ ಮಾಡಿದ್ದಾನೆ ಎಂಬುದನ್ನು ತಿಳಿದುಕೊಂಡು ಶೋಧ ಕಾರ್ಯ ನಡೆಸಲಿದ್ದಾರೋ? ಎಂಬುದನ್ನು ನೋಡಬೇಕಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!