ಪ್ರಜ್ವಲ್ ರೇವಣ್ಣ ಕೇಸ್ ನಲ್ಲಿ ಟ್ವಿಸ್ಟ್: ಸಂತ್ರಸ್ತೆಗೆ ಮೂವರಿಂದ ಬೆದರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ ಪೊಲೀಸರೆಂದು ಹೇಳಿಕೊಂಡು ಬಂದಿರುವ ಮೂವರು ಸಂತ್ರಸ್ತೆಗೆ ಬೆದರಿಕೆ ಹಾಕಿರುವ ಆರೋಪವೊಂದು ಕೇಳಿಬಂದಿದೆ.

ಈ ಸಂಬಂಧ ಇಂದು ರಾಷ್ಟ್ರೀಯ ಮಹಿಳಾ ಆಯೋಗ (‌ National Women’s Commission) ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ. ಇದರಲ್ಲಿ ಬೆದರಿಕೆ ಹಾಕಿರುವ ಬಗ್ಗೆ ಸಂತ್ರಸ್ತೆ ಆಯೋಗಕ್ಕೆ ದೂರು ನೀಡಿದ್ದಾರೆ ಎಂದು ತಿಳಿಸಲಾಗಿದೆ.

ಸಿವಿಲ್ ಡ್ರೆಸ್‍ನಲ್ಲಿ ಬಂದಿದ್ದ ಮೂವರು ಬೆದರಿಕೆ ಹಾಕಿದ್ದಾರೆ. ಪೊಲೀಸರು ಎಂದು ಹೇಳಿಕೊಂಡು ಬಂದ ಮೂವರು, ಪ್ರಜ್ವಲ್ ವಿರುದ್ಧ ಸುಳ್ಳು ದೂರು ಕೊಡುವಂತೆ ಒತ್ತಡ ಹೇರಿದ್ದಾರೆ. ಬೇರೆ, ಬೇರೆ ಫೋನ್ ನಂಬರ್‍ ಗಳಿಂದ ನಿರಂತರ ಕರೆ ಮಾಡಲಾಗಿದೆ. ಅಲ್ಲದೇ ದೂರವಾಣಿ ಮೂಲಕವು ಸಹ ಒತ್ತಡ ಹಾಕಲಾಗಿದೆ ಎಂದು ಸಂತ್ರಸ್ತೆ ದೂರಿರುವುದಾಗಿ ಮಹಿಳಾ ಆಯೋಗ ತಿಳಿಸಿದೆ.

ಒಟ್ಟಿನಲ್ಲಿ ಒಂದೆಡೆ ಪ್ರಜ್ವಲ್ ರೇವಣ್ಣ ಕೇಸ್ ಸಂಬಂಧ ತನಿಖೆ ಮಾಡಲಾಗುತ್ತಿದೆ. ಇದಕ್ಕೆ ವಿಶೇಷ ತನಿಖೆ ತಂಡವನ್ನು ಕೂಡ ರಚನೆ ಮಾಡಲಾಗಿದೆ. ಆದರೆ ಇತ್ತ ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆ ಮೇಲೆ ಒತ್ತಡ ಹಾಕಲಾಗಿದೆ ಎನ್ನುವ ಮೂಲಕ ಆಯೋಗ ಸ್ಫೋಟಕ ತಿರುವು ಕೊಟ್ಟಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!