ಲೈಂಗಿಕ ಶೋಷಣೆ ಪ್ರಕರಣದಲ್ಲಿ ಟ್ವಿಸ್ಟ್: ಪ್ರತಿಭಟನೆ ನಡೆಸಿದ ಕುಸ್ತಿಪಟುಗಳ ವಿರುದ್ಧವೇ ಹೈಕೋರ್ಟ್‍ನಲ್ಲಿ ದೂರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಭಾರತೀಯ ಕುಸ್ತಿ ಫೆಡರೇಷನ್‍ ನಲ್ಲಿ (WFI)ಅಧ್ಯಕ್ಷ ಬ್ರಿಜ್ ಭೂಷಣ್ ಮೇಲಿನ ಲೈಂಗಿಕ ಶೋಷಣೆ ಆರೋಪ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.
ಪ್ರತಿಭಟನೆ ನಡೆಸಿದ್ದ ರೆಸ್ಲರ್ ವಿನೆಶಾ ಫೋಗಟ್, ಭಜರಂಗ್‌ ಪೂನಿಯಾ ಸೇರಿ ಇತರೇ ಕುಸ್ತಿಪಟುಗಳ ವಿರುದ್ಧವೇ ದೆಹಲಿ ಹೈಕೋರ್ಟ್‍ನಲ್ಲಿ (Delhi High Court) ದೂರು ದಾಖಲಾಗಿದೆ.

ತಾತ್ಕಾಲಿಕವಾಗಿ ಅಮಾನತುಗೊಂಡಿರುವ ಬ್ರಿಜ್ ಭೂಷಣ್ (Brij Bhushan) ಮನೆಯಲ್ಲಿ ಅಡುಗೆ ಕೆಲಸ ಮಾಡುವ ವಿಕ್ಕಿ ಕೋರ್ಟ್‌ನಲ್ಲಿ ಅರ್ಜಿ ಹಾಕಿದ್ದಾರೆ.

ಲೈಂಗಿಕ ದೌರ್ಜನ್ಯ ನಿಗ್ರಹ ಕಾಯ್ದೆಯನ್ನು ಮಹಿಳಾ ಕುಸ್ತಿಪಟುಗಳು ಸಂಪೂರ್ಣವಾಗಿ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಒಂದು ವೇಳೆ ಯಾರಾದರೂ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದರೆ ಅಂಥವರು ಕಾನೂನು ಪ್ರಕಾರ ಪೊಲೀಸ್ ಠಾಣೆ, ಕೋರ್ಟ್ ಮೆಟ್ಟಿಲೇರಬೇಕು. ಈ ಪ್ರಕರಣದಲ್ಲಿ ಯಾವೊಬ್ಬ ಮಹಿಳಾ ಕುಸ್ತಿಪಟು ದೂರು ನೀಡಿಲ್ಲ. ಆದರೆ ಇಲ್ಲಿ ಡಬ್ಲುಎಫ್‍ಐ ಅಧ್ಯಕ್ಷರ ರಾಜೀನಾಮೆ ಪಟ್ಟು ಹಿಡಿದು ನ್ಯಾಯಪ್ರಕ್ರಿಯೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ.ಸುಳ್ಳು ಲೈಂಗಿಕ ದೌರ್ಜನ್ಯದ ಆರೋಪಗಳನ್ನು ಮಾಡುವ ಮೂಲಕ ಸುಲಿಗೆ ಮತ್ತು ಬ್ಲ್ಯಾಕ್‌ಮೇಲ್‌ ಮತ್ತು ರಾಜೀನಾಮೆ ನೀಡುವಂತೆ ಒತ್ತಾಯಿಸಿದ ಕುಸ್ತಿಪಟುಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!