ಕೆಜಿಎಫ್ ಹಾಡು ಬಳಸಿದ್ದಕ್ಕೆ ಟ್ವಿಟರ್ ಅಕೌಂಟ್ ಬ್ಲಾಕ್ : ಹೈಕೋರ್ಟ್ ಮೊರೆ ಹೋದ ಕಾಂಗ್ರೆಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

‘ಕೆಜಿಎಫ್’ ಹಾಡು ಬಳಸಿದ್ದಕ್ಕೆ ಕಾಂಗ್ರೆಸ್ ಟ್ವಿಟರ್ ಅಕೌಂಟ್ ಬ್ಲಾಕ್ ಮಾಡುವಂತೆ ಬೆಂಗಳೂರು ನ್ಯಾಯಾಲಯ ನಿನ್ನೆ ಆದೇಶ ನೀಡಿದ್ದು, ಇದೀಗ ಆ ಆದೇಶ ಪ್ರಶ್ನಿಸಿ ಕಾಂಗ್ರೆಸ್ ಹೈಕೋರ್ಟ್ ಮೊರೆ ಹೋಗಿದೆ.

ಭಾರತ್ ಜೋಡೋ’ ಯಾತ್ರೆಗೆ ಕೆಜಿಎಫ್ ( KGF) ಮ್ಯೂಸಿಕ್ ಬಳಸಿದ ಆರೋಪದ ಮೇರೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್ ಐ ಆರ್(FIR) ದಾಖಲಾಗಿತ್ತು.

ಬೆಂಗಳೂರು ನ್ಯಾಯಾಲಯದ ಆದೇಶ ಪ್ರಶ್ನಿಸಿ ಕಾಂಗ್ರೆಸ್ ಹೈಕೋರ್ಟ್ ಗೆ ಮನವಿ ಸಲ್ಲಿಸಿದೆ. ಈ ಬಗ್ಗೆ ತುರ್ತು ವಿಚಾರಣೆ ನಡೆಸುವಂತೆ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆಯಾಗಿದೆ.

ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯ ವಿಡಿಯೋಗಳಿಗೆ ‘ಕೆಜಿಎಫ್’ ಸಿನಿಮಾದ ಹಾಡೊಂದರ ಮ್ಯೂಸಿಕ್ ಬಳಸಿರುವ ಆರೋಪ ಕೇಳಿ ಬಂದಿದ್ದು, ಕಾಪಿ ರೈಟ್ಸ್ ಉಲ್ಲಂಘನೆ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಮೇಲೆ ಎಮ್.ಆರ್.ಟಿ ಸಂಸ್ಥೆಯು ಕಾನೂನು ಸಮರಕ್ಕೆ ಮುಂದಾಗಿದ್ದು, ಸಂಸ್ಥೆಯು ದೂರು ದಾಖಲಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here