ಟ್ವಿಟ್ಟರ್‌ಗೆ ಹೊಸ ಸಿಇಒ ನೇಮಿಸಿದ ಎಲಾನ್‌ ಮಸ್ಕ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಟ್ವಿಟ್ಟರ್‌ಗೆ ಹೊಸ ಸಿಇಒ ನೇಮಕ ಮಾಡಿರುವುದಾಗಿ ಎಲಾನ್‌ ಮಸ್ಕ್‌ ಘೋಷಿಸಿದ್ದಾರೆ. ಆದರೆ ಹೊಸ ಸಿಇಒ ಹೆಸರನ್ನು ಮಸ್ಕ್‌ ಬಹಿರಂಗಪಡಿಸಿಲ್ಲ.

ಈ ಕುರಿತು ಟ್ವಿಟರ್‌ನಲ್ಲಿ ಮಸ್ಕ್, ʼಟ್ವಿಟರ್‌ಗೆ ಹೊಸ ಸಿಇಒ ನೇಮಕ ಮಾಡಿದ್ದೇನೆ ಎಂದು ಘೋಷಿಸಲು ನಾನು ಖುಷಿಪಡುತ್ತೇನೆ. ಆರು ವಾರದೊಳಗೆ ಅವರು ಹುದ್ದೆಯನ್ನು ಅಲಂಕರಿಸಲಿದ್ದಾರೆʼ ಎಂದು ಟ್ವೀಟ್‌ ಮಾಡಿದ್ದಾರೆ.

ಅದಲ್ಲದೆ ತಾವು ಮುಖ್ಯ ತಂತ್ರಜ್ಞಾನ ಅಧಿಕಾರಿಯಾಗಿ ಜವಾಬ್ದಾರಿ ವಹಿಸಿಕೊಳ್ಳುವುದಾಗಿ ಮಸ್ಕ್‌ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!