Thursday, August 11, 2022

Latest Posts

ಪ್ರತ್ಯೇಕ ರಸ್ತೆ ಅಪಘಾತ: ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ದುರ್ಮರಣ

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜಸ್ಥಾನದಲ್ಲಿ ಎರಡು ಪ್ರತ್ಯೇಕ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 6 ಮಂದಿ ಮೃತಪಟ್ಟ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ಭಾನುವಾರ ಮುಂಜಾನೆ ಉತ್ತರಪ್ರದೇಶದ ಕರೌಲಿ ಜಿಲ್ಲೆಯಲ್ಲಿ ಟ್ರಕ್-ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೈಲಾ ದೇವಿ ದೇವಾಲಯಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಎಸ್’ಯುವಿ ಕಾರಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 3 ಮಂದಿ ಮೃತಪಟ್ಟಿದ್ದು, 9 ಮಂದಿ ಗಾಯಗೊಂಡಿದ್ದಾರೆ.

ಉಜ್ವಲ್, ವೈಷ್ಣವಿ ಮತ್ತು ಚಾಲಕ ದೇವೇಂದ್ರ ಮೃತರೆಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜಲೋರ್ ಜಿಲ್ಲೆಯಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಬೈಕ್ ವೊಂದಕ್ಕೆ ಜೀಪ್ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಮೃತಪಟ್ಟ ಎಲ್ಲರೂ ಸುಧಾಮಾತಾ ದೇವಾಲಯಕ್ಕೆ ತೆರಳಿ ತಮ್ಮ ಗ್ರಾಮಕ್ಕೆ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಮೃತರನ್ನು ಜಿತೇಂದ್ರ ಕುಮಾರ್, ಮದನ್ ಕುಮಾರ್ ಹಾಗೂ ಮಹೇಂದ್ರ ಕುಮಾರ್ ಎಂದು ಗುರುತಿಸಲಾಗಿದೆ.
ಎರಡೂ ಘಟನೆಯ ಬಗ್ಗೆ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss