24 ಗಂಟೆಯಲ್ಲಿ ಕಾನ್ಪುರದಲ್ಲಿ ಎರಡು ಅಪಘಾತ: 32 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾನ್ಪುರದಲ್ಲಿ ಕಳೆದ 24 ಗಂಟೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಒಟ್ಟು 32 ಮಂದಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.

ಮೊದಲನೇ ಘಟನೆಯ ಶನಿವಾರ ರಾತ್ರಿ ನಡೆದಿದ್ದು ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ಕೊಳಕ್ಕೆ ಬಿದ್ದ ಪರಿಣಾಮ 27 ಮಂದಿ ಸಾವನ್ನಪ್ಪಿದ್ದಾರೆ. ಬಲಿಯಾದವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳಾಗಿದ್ದು, ಸಾವಿನ ಸಂಖ್ಯೆ ಹೆಚ್ಚಿದೆ ಎನ್ನಲಾಗಿದೆ.
ಟ್ರಾಕ್ಟರ್-ಟ್ರಾಲಿಯು ಸುಮಾರು 50 ಜನ ಪ್ರಯಾಣಿಕರೊಂದಿಗೆ ಫತೇಪುರದ ಚಂದ್ರಿಕಾ ದೇವಿ ದೇವಸ್ಥಾನದಲ್ಲಿ “ಮುಂಡನ್” ಸಮಾರಂಭದಲ್ಲಿ ಭಾಗವಹಿಸಿದ ನಂತರ ಘಟಂಪುರಕ್ಕೆ ತೆರಳುತ್ತಿತ್ತು.

ಕಾನ್ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ವಿಶಾಕ್ ಜಿ ಅಯ್ಯರ್ ಹೇಳಿರುವ ಪ್ರಕಾರ, ಹತ್ತಕ್ಕೂ ಹೆಚ್ಚು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳಿಗೆ ಸಮೀಪದ ವೈದ್ಯಕೀಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಎರಡನೇ ಘಟನೆಯಲ್ಲಿ, ಉತ್ತರ ಪ್ರದೇಶದ ಕಾನ್ಪುರದ ಅಹಿರ್ವಾನ್ ಮೇಲ್ಸೇತುವೆಯಲ್ಲಿ ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಐದು ಜನರು ಸಾವನ್ನಪ್ಪಿದ್ದು ಎಂಟು ಮಂದಿ ಗಾಯಗೊಂಡಿದ್ದಾರೆ. ಯುಪಿ ಪೊಲೀಸರ ಪ್ರಕಾರ, ಅಹಿರ್ವಾನ್ ಮೇಲ್ಸೇತುವೆಯಲ್ಲಿ ವೇಗವಾಗಿ ಬಂದ ಟ್ರಕ್ ಲೋಡರ್ ಟೆಂಪೋಗೆ ಡಿಕ್ಕಿ ಹೊಡೆದು ಐವರು ಸಾವನ್ನಪ್ಪಿದರು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಮತ್ತು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ ಪರಿಹಾರವನ್ನು ನೀಡುವುದಾಗಿ ಘೋಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!