ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಚೇತನ್ ಚಂದ್ರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ ಇಬ್ಬರನ್ನು ಪೊಲೀಸರು ಸೋಮವಾರ ಬೆಳಗ್ಗೆ ಬಂಧಿಸಿದ್ದಾರೆ.
ಭಾನುವಾರ ರಾತ್ರಿ ಆರು ಜನರ ತಂಡ ತಮ್ಮ ಮೇಲೆ ಹಲ್ಲೆ ನಡೆಸಿದೆ ಎಂದು ಚೇತನ್ ಚಂದ್ರ ಅವರು ಕಗ್ಗಲಿಪುರ ಪೊಲೀಸರಿಗೆ ದೂರು ನೀಡಿದ್ದರು.
ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದ ಕಿಡಿಗೇಡಿಗಳು, ಬೈಕ್ಗೆ ಟಚ್ ಮಾಡಿದ್ದೀರಿ ಎಂದು ಗಲಾಟೆ ಶುರುಮಾಡಿದರು. ದುಡ್ಡು ಕೇಳಿದರು. ಹಣ ಕೊಡುವುದಿಲ್ಲ ಎಂದಿದ್ದಕ್ಕೆ ಗಲಾಟೆ ಮಾಡಿದರು. ಬಳಿಕ ಬೈಕ್ನಲ್ಲಿ ಚೇಸ್ ಮಾಡಿಕೊಂಡು ಬಂದು ಕಾರಿಗೆ ಬೈಕ್ ಅಡ್ಡಹಾಕಿ, ನನ್ನ ಮೇಲೆ ಹಲ್ಲೆ ನಡೆಸಿದರು ಎಂದು ಹೇಳಿದ್ದಾರೆ.
ಬೈಕ್ ಚಾಲಕ ಕುಡಿದಿದ್ದ ಮತ್ತು ನಟನ ಕಾರಿಗೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ್ದಾನೆ. ಸದ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.