March 19, 2026
Thursday, March 19, 2026
spot_img

ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರು ಅರೆಸ್ಟ್‌, ಸಂತ್ರಸ್ತೆಯರಿಗೆ ಮರುಜೀವ

ಹೊಸದಿಗಂತ ವರದಿ ಮಡಿಕೇರಿ:

ಕುಶಾಲನಗರದ ಮುಳ್ಳುಸೋಗೆಯ ಮನೆಯೊಂದರಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸಿರುವ ಪೊಲೀಸರು,ಇಬ್ಬರು ಸಂತ್ರಸ್ತೆಯರನ್ನು ರಕ್ಷಿಸಿದ್ದಾರೆ.

ಕುಶಾಲನಗರ ಟೌನ್ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಬುಧವಾರ ರಾತ್ರಿ ಮುಳ್ಳುಸೋಗೆಯ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ ದಾಳಿ ನಡೆಸಿದ್ದಾರೆ. ಈ ಸಂದರ್ಭ ಮೈಸೂರು ಮತ್ತು ಸೋಮವಾರಪೇಟೆಯ ಇಬ್ಬರು ಯುವತಿಯರನ್ನು ಬಳಸಿ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿರುವುದು ಬೆಳಕಿಗೆ ಬಂದಿದ್ದು, ಯುವತಿಯರನ್ನು ರಕ್ಷಿಸಿ ಮಡಿಕೇರಿಯ ಮಹಿಳಾ ಸಾಂತ್ವನ ಕೇಂದ್ರಕ್ಕೆ ದಾಖಲಿಸಿದ್ದಾರೆ.

ಸ್ಥಳದಲ್ಲಿದ್ದ ಕೆಲವರು ಪರಾರಿಯಾಗಿದ್ದು, ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಪರಾರಿಯಾದವರ ಪತ್ತೆಗೆ ಶೋಧ ಮುಂದುವರೆದಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಹಾಗೂ ಡಿವೈಎಸ್‌ಪಿ ಚಂದ್ರಶೇಖರ್ ಮಾರ್ಗದರ್ಶನದಲ್ಲಿ, ಕುಶಾಲನಗರ ಟೌನ್ ಪೊಲೀಸ್ ಇನ್ಸ್‌ಪೆಕ್ಟ‌ರ್ ಪ್ರದೀಪ್‌ ಕುಮಾ‌ರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಶಿವಣ್ಣ, ಗೀತಾ, ಸಿಬ್ಬಂದಿಗಳಾದ ಶಿವರಾಜು, ಜಾವಿದ್, ಬಸವರಾಜ್, ಗಾಯತ್ರಿ, ಜಯಶ್ರೀ ಮತ್ತಿತರರು ಪಾಲ್ಗೊಂಡಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !