April 18, 2026
Saturday, April 18, 2026
spot_img

ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ ಸಬ್ ರಿಜಿಸ್ಟ್ರಾರ್ ಸೇರಿ ಇಬ್ಬರ ಬಂಧನ

ಹೊಸದಿಗಂತ ವರದಿ ಬೆಳಗಾವಿ :

ಜಿಲ್ಲೆಯ ಹುಕ್ಕೇರಿ ತಾಲೂಕಿನ ಕುರಣಿ ಗ್ರಾಮದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಕಳೆದ 16 ದಿನಗಳಿಂದ ಆರೋಪಿಗಳು ತಲೆಮರೆಸಿಕೊಂಡಿದ್ದರು.

ನಕಲಿ ದಾಖಲೆ ಸೃಷ್ಟಿಸಿ ಜಮೀನು ಖರೀದಿ, ಮಾರಾಟ ಮಾಡಿಸಿದ ಆರೋಪದಡಿ ಹುಕ್ಕೇರಿ ತಾಲೂಕಾ ಸಬ್ ರಿಜಿಸ್ಟ್ರಾರ್ ಸೇರಿದಂತೆ ಇಬ್ಬರನ್ನ ಹುಕ್ಕೇರಿ ಪೊಲೀಸರು ಬಂಧಿಸಿದ್ದಾರೆ.

ಸಬ್ ರಿಜಿಸ್ಟ್ರಾರ್ ಮಡಿವಾಳಯ್ಯ ಬಾನಿಮಠ ಹಾಗೂ ಬಾಂಡ್ ರೈಟರ್ ಆನಂದ ದಡ್ಡಿಮನಿ ಬಂಧಿತ ಆರೋಪಿಗಳು. ಆರೋಪಿಗಳು ನಿರಪೇಕ್ಷಣಾ ಜಾಮೀನು ಮಂಜೂರಾದ ಬಳಿಕ ಜಾಮೀನು ಪಡೆಯಲು ಹುಕ್ಕೇರಿಗೆ ಬಂದಿದ್ದರು. ಇನ್ನೇನು ಜಾಮೀನು ಪತ್ರಗಳನ್ನು ತೋರಿಸಿ ನಿರಾಳರಾಗುವಷ್ಟರಲ್ಲಿ ಹುಕ್ಕೇರಿ ಪೊಲೀಸರು ಆರೋಪಿಗಳನ್ನು ಬಂಧಿಸಿ ಗೋಕಾಕ ಜೈಲಿಗಟ್ಟಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಯಮಕನಮರಡಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಮುಂದಿನ ತನಿಖೆಯನ್ನು ಹುಕ್ಕೇರಿ ಪೊಲೀಸರು ಕೈಗೊಂಡಿದ್ದಾರೆ. ಈ ಕುರಿತು ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !