ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರ ಪ್ರದೇಶ ರಾಜ್ಯದ ಬಾಪಟ್ಲ ಜಿಲ್ಲೆಯಲ್ಲಿ ಬೆಂಗಳೂರು ಮೂಲದ ಇಬ್ಬರು ಉದ್ಯಮಿಗಳು ಬರ್ಬರವಾಗಿ ಕತ್ತು ಸೀಳಿ ಕೊಲೆ ಮಾಡಿ, ಹೆದ್ದಾರಿ ಬಳಿಯಲ್ಲಿ ಬೀಸಾಡಲಾಗಿದೆ.
ಆಂಧ್ರ ಪ್ರದೇಶ ರಾಜ್ಯದ ಬಾಪಟ್ಲ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಇವರಿಬ್ಬರೂ ತಂದೆ-ಮಗ ಆಗಿದ್ದಾರೆ. ರಿಯಲ್ ಎಸ್ಟೇಟ್ ಸಂಬಂದಿಸಿದಂತೆ ಕೋರ್ಟ್ ಕೇಸಿಗೆ ತೆರಳಿದ್ದಾಗ, ಇಬ್ಬರನ್ನೂ ಅಪಹರಿಸಿ ಕೊಲೆ ಬರ್ಬರವಾಗಿ ಕತ್ತು ಸೀಳಿದ್ದಾರೆ.
ಮೃತರನ್ನು ಮಹದೇವಪುರ ಬಿಜೆಪಿ ಯುವ ಮುಖಂಡ ಮತ್ತು ಉದ್ಯಮಿ ಪ್ರಶಾಂತರೆಡ್ಡಿ ಹಾಗೂ ಅವರ ತಂದೆ ವೀರಸ್ವಾಮಿರೆಡ್ಡಿ ಎಂದು ಗುರುತಿಸಲಾಗಿದೆ. ಮಾಜಿ ಸಚಿವ ಅರವಿಂದ ಲಿಂಬಾವಳಿ ಆಪ್ತರಾಗಿದ್ದ ತಂದೆ-ಮಗ ಇದೀಗ ಶವವಾಗಿ ಪತ್ತೆಯಾಗಿದ್ದಾರೆ.
ವೀರಸ್ವಾಮಿ ರೆಡ್ಡಿ ಹಾಗೂ ಪ್ರಶಾಂತ ರೆಡ್ಡಿ ಇಬ್ಬರೂ ಇಬ್ಬರೂ ಬೆಂಗಳೂರಿನ ಕಾಡುಗುಡಿ ಮೂಲದ ಉದ್ಯಮಿಗಳು ಆಗಿದ್ದರು. ಕಳೆದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿಯೂ ಬಿಜೆಪಿ ಪರವಾಗಿ ಕೆಲಸ ಮಾಡಿದ್ದರು. ಆದರೆ, ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂದಿಸಿದ ಕೋರ್ಟ್ ಕೇಸ್ ವಿಚಾರಣೆಗೆ ಆಂಧ್ರ ಪ್ರದೇಶ ರಾಜ್ಯಕ್ಕೆ ತೆರಳಿದ್ದರು. ಈ ವೇಳೆ ಇಬ್ಬರನ್ನೂ ಅಪಹರಣ ಮಾಡಿ ಕೊಲೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.