ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿ: ಬೈಕ್ ಸವಾರರಿಬ್ಬರು ಸಾವು

ಹೊಸದಿಗಂತ ವರದಿ ಕಲಬುರಗಿ:

ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯ ಬಳಿ ಭಾನುವಾರ ನಡೆದಿದೆ.

ಅಶೋಕ್ ಇಂಗಳೆ 53, ಸಲ್ಲಾವುದ್ದಿನ 15 ಎಂಬುವವರೇ ಮೃತಪಟ್ಟ ದುರ್ದೈವಿಗಳು. ಇವರು ಆಳಂದ ಪಟ್ಟಣದ ರೇವಣಸಿದ್ಧೇಶ್ವರ ಕಾಲೋನಿ ನಿವಾಸಿಗಳು ಎಂದು ತಿಳಿದುಬಂದಿದೆ.

ಗೂಡ್ಸ್ ವಾಹನವನ್ನು ಓವರ್ ಟೇಕ್ ಮಾಡಲು ಹೋಗಿ ಈ ಅವಘಡ ಸಂಭವಿಸಿದ್ದು, ನರೋಣಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!