SHOCKING | ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಜಿಲ್ಲೆಯ ಶಿಡಿಗಿನಮೊಳ ಗ್ರಾಮದಲ್ಲಿ ಹೊಲದಲ್ಲಿದ್ದ ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವಿಗೀಡಾಗಿರುವ ಘಟನೆ ಗುರುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತರನ್ನು ರಾಜೇಶ್ (11) ಮತ್ತು ಶಿವಶಂಕರ್ (12) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಕ್ರಿಕೆಟ್ ಆಡಿದ ನಂತರ ಮಕ್ಕಳು ಈಜಲು ಹೋಗಿದ್ದಾಗ ದುರ್ಘಟನೆ ಸಂಭವಿಸಿದೆ.

‘ನಾಲ್ವರು ಬಾಲಕರು ಈಜಲೆಂದು ಕೃಷಿ ಹೊಂಡಕ್ಕೆ ತೆರಳಿದ್ದಾರೆ. ಈ ವೇಳೆ ಒಬ್ಬ ನೀರಿಗಿಳಿದ ಕೂಡಲೇ ಮುಳುಗಿದರೆ, ಆತನ ರಕ್ಷಣೆಗೆಂದು ನೀರಿಗಿಳಿದ ಮತ್ತೊಬ್ಬ ಬಾಲಕ ಕೂಡ ಮುಳುಗಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪರಮದೇವನಹಳ್ಳಿ (ಪಿಡಿ ಗ್ರಾಮ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ರಾಜೇಶ್ ಮತ್ತು ಶಿವಶಂಕರ್ ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!